ಶಿರೂರು ಜ್ಞಾನದ ಶೈಕ್ಷಣಿಕ ಸಂಸ್ಥೆ: ಭತ್ತದ ಗದ್ದೆಗಿಳಿದ ವಿದ್ಯಾರ್ಥಿಗಳಿಗೆ ಕೃಷಿ ಪಾಠ!

Views: 509
ಕನ್ನಡ ಕರಾವಳಿ ಸುದ್ದಿ :ಇಂದಿನ ಮಕ್ಕಳಲ್ಲಿ ಮರೆಯಾಗುತ್ತಿರುವ ಕೃಷಿ ಆಸಕ್ತಿಯನ್ನು ಮತ್ತೆ ಮೂಡಿಸಬೇಕು, ತರಗತಿಯಲ್ಲಿ ಕೃಷಿ ಪಾಠ ಮಾಡುವುದಕ್ಕಿಂತ ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿ ಮನದಟ್ಟು ಮಾಡಲು ಸಾಧ್ಯ ಎಂಬ ಆಶಯದೊಂದಿಗೆ ಜ್ಞಾನದ ಶೈಕ್ಷಣಿಕ ಸಂಸ್ಥೆಯ ವಿದ್ಯಾರ್ಥಿಗಳು ಗದ್ದೆಯಲ್ಲಿ ಭತ್ತದ ನಾಟಿ ಮಾಡುವ ಮೂಲಕ ಕೃಷಿ ಶಿಕ್ಷಣದ ಪ್ರಾತ್ಯಕ್ಷಿಕೆಯನ್ನು ಪಡೆದುಕೊಂಡರು.
ಭತ್ತ ಬೆಳೆಯುವತ್ತ ಚಿಣ್ಣರ ಚಿತ್ತ ಶಾಲೆಯಲ್ಲಿ ಸಾಮಾನ್ಯವಾಗಿ ಆಟ ಪಾಠಗಳ ಜೊತೆಗೆ ಕೆಲ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದು ಸಾಮಾನ್ಯ ಆದರೆ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಜ್ಞಾನದಾ ಶಿಕ್ಷಣದ ಸಂಸ್ಥೆಯ ಮಕ್ಕಳನ್ನು ಗದ್ದೆಗೆ ಇಳಿಸಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸುವ ಮೂಲಕ ವಿಭಿನ್ನವಾಗಿ ಪಾಠ ಮಾಡಲಾಗಿದೆ. ನಾಲ್ಕು ಗೋಡೆಗಳ ಮಧ್ಯೆ ಪಾಠ ಕೇಳುತ್ತ ತಲ್ಲೀನರಾಗಿರುವ ಪ್ರೌಢಶಾಲಾ ಮಕ್ಕಳಿಗೆ ಗದ್ದೆ ಎಂದರೇನು? ಬೇಸಾಯ ಎಂದರೆ ಹೇಗೆ? ನಾಟಿ ಹೇಗೆ ಮಾಡಬೇಕು ಎನ್ನುವ ಮಾಹಿತಿ ನೀಡುತ್ತಾ ಮಕ್ಕಳನ್ನು ಕೃಷಿಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲಾಯಿತು ಮಕ್ಕಳು ಮಳೆಯನ್ನು ಲೆಕ್ಕಿಸದೆ ಉತ್ಸುಕತೆಯಿಂದ ಪಾಲ್ಗೊಂಡು ಗದ್ದೆಯಲ್ಲಿ ನಾಟಿ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು ಹರ್ಷ ವ್ಯಕ್ತಪಡಿಸಿದ ಗ್ರಾಮಸ್ಥರು ತರಗತಿಯಲ್ಲಿ ಪಾಠ ಮಾಡುವುದರ ಜೊತೆಗೆ ಪ್ರಾಯೋಗಿಕವಾಗಿ ತೋರ್ಪಡಿಸುವುದರಿಂದ ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿಯನ್ನು ಮನದಟ್ಟು ಮಾಡಲು ಸಾಧ್ಯ ಎಂದು ಶಿರೂರಿ ನಾಗಿನಗದ್ದೆಯ ಪ್ರಗತಿಪರ ಕೃಷಿಕರಾದ ಶ್ರೀ ನಾಗೇಶ್ ಮೇಸ್ತ ಇವರು ತಮ್ಮ ಸ್ವಂತ ಕೃಷಿ ಭೂಮಿಯಲ್ಲಿ ನಾಟಿ ಮಾಡಲು ಅವಕಾಶ ಕಲ್ಪಿಸಿ ವಿದ್ಯಾರ್ಥಿಗಳಿಗೆ ಎದುರಾದ ಹಲವು ಪ್ರಶ್ನೆಗಳಿಗೆ ಮಾಹಿತಿ ನೀಡಿದರು ಮಕ್ಕಳಲ್ಲಿ ಕ್ರಿಯಾಶೀಲತೆ ಬೆಳೆಸಲು ಸಹಕಾರ ನೀಡಿದ ಶ್ರೀಯುತರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಲಾಯಿತು.
ಪ್ರಾಂಶುಪಾಲ ಡಾ. ರವಿದಾಸ್ ಶೆಟ್ಟಿ ಇವರ ಮಾರ್ಗದರ್ಶನದಲ್ಲಿ ಹಮ್ಮಿಕೊಂಡ ಈ ಅದ್ಭುತ ಕಾರ್ಯಕ್ರಮದಲ್ಲಿ ಶಿಕ್ಷಕರು ಭತ್ತದ ಸಸಿ ನಾಟಿಮಾಡುವ ಮೂಲಕ ಚಾಲನೆ ನೀಡಿದರು. ಈ ಕೃಷಿ ಪ್ರಾತ್ಯಕ್ಷಿಕೆ ಎಲ್ಲರ ಗಮನ ಸೆಳೆಯಿತು. ಕೊನೆಯಲ್ಲಿ ಶ್ರೀ ನಾಗೇಶ್ ಮೇಸ್ತ ಕುಟುಂಬದವರು ಎಲ್ಲರಿಗೂ ಲಘು ಉಪಹಾರ ನೀಡಿದರು.