ಜನಮನ

ಶಿವಮೊಗ್ಗದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ

Views: 0

ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ.

ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಟಿಪ್ಪು ನಗರ ಏಳನೇ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ.

ಸುಮಾರು 50 ವರ್ಷ ವ್ಯಕ್ತಿ ಒಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಲಾಗಿದೆ. ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ವ್ಯಕ್ತಿ ಮೃತಪಟ್ಟಿದ್ದಾರೆ.

ಕೊಲೆಗೆ ನಿಖರ ಕಾರಣ  ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button
error: Content is protected !!