ರಾಜಕೀಯ
ಶಿವಮೊಗ್ಗ ಲೋಕಸಭೆ :ರಾಘವೇಂದ್ರ ಗೆಲುವು, ಠೇವಣಿ ಕಳೆದುಕೊಂಡ ಈಶ್ವರಪ್ಪ

Views: 165
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ 2024ರ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಗೆಲವು ಸಾಧಿಸಿದ್ದಾರೆ. ಕಾಂಗ್ರೆಸ್ನ ಗೀತಾ ಶಿವರಾಜ್ ಕುಮಾರ್, ಪಕ್ಷೇತರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ ಸೋಲು ಕಂಡಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ 2024ರ ಮತ ಎಣಿಕೆ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ನಡೆಯಿತು. ಮೇ 7ರಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಒಟ್ಟು 13,72,949 ಮತಗಳು ಚಲಾವಣೆಯಾಗಿದ್ದವು.
ಅಂಚೆ ಮತಗಳ ಎಣಿಕೆಯಿಂದಲೂ ಬಿಜೆಪಿಯ ಬಿ. ವೈ. ರಾಘವೇಂದ್ರ ಮುನ್ನಡೆ ಪಡೆದುಕೊಂಡಿದ್ದರು. ಸದ್ಯ 16ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದೆ. ಬಿಜೆಪಿಯ ಬಿ. ವೈ. ರಾಘವೇಂದ್ರ 5,72,359 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ನ ಗೀತಾ ಶಿವರಾಜ್ ಕುಮಾರ್ 404570 ಮತ ಮತ್ತು ಕೆ. ಎಸ್. ಈಶ್ವರಪ್ಪ 21,920 ಮತಗಳನ್ನು ಪಡೆದಿದ್ದಾರೆ.
ಬಿ. ವೈ. ರಾಘವೇಂದ್ರ 1,67,789 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ.






