ಜನಮನ

ಶುದ್ಧ ಕುಡಿಯುವ ನೀರು ‘ಬಿಸ್ಲೆರಿ’ಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ; ಕಾನೂನು ಕ್ರಮಕ್ಕೆ FSSAI ಅನುಮತಿ

Views: 0

ಕನ್ನಡ ಕರಾವಳಿ ಸುದ್ದಿ: ಶುದ್ಧ ಕುಡಿಯುವ ನೀರು ಬಿಸ್ಲರಿಯಲ್ಲಿ ಕ್ಯಾನ್ಸರ್ಕಾರಕ ಅಂಶ ಪತ್ತೆಯಾಗಿದೆ. ‘ಬಿಸ್ಲೆರಿ ಇಂಟರ್‌ನ್ಯಾಷನಲ್’ ಸಂಸ್ಥೆಯ ಕುಡಿಯುವ ನೀರಿನ ಮಾದರಿಯು ಕುಡಿಯಲು ಅಸುರಕ್ಷಿತ ಎಂದು ಕಂಡುಬಂದಿದೆ.

ಈ ಹಿನ್ನೆಲೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಕಂಪನಿಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದೆ. ಆದರೆ, ಬಿಸ್ಲೆರಿಯ ಯಾವ ನಿರ್ದಿಷ್ಟ ಮಾದರಿಯ ಕುಡಿಯುವ ನೀರು ಅಸುರಕ್ಷಿತವಾಗಿದೆ ಎಂಬುದನ್ನು ಪ್ರಾಧಿಕಾರವು ಇದುವರೆಗೂ ಬಹಿರಂಗಪಡಿಸಿಲ್ಲ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ (FSS Act, 2006) ಅಡಿಯಲ್ಲಿ, ಅಸುರಕ್ಷಿತ ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದ ಉಲ್ಲಂಘನೆಗಳಿಗಾಗಿ ಕಂಪನಿಯ ವಿರುದ್ಧ ಕ್ರಮಕ್ಕೆ ಮುಂದಾಗಿರುವುದಾಗಿ ಎಫ್‌ಎಸ್‌ಎಸ್‌ಎಐ ಎಕ್ಸ್ನಲ್ಲಿ ಪೋಸ್ಟ್‌ ಹಂಚಿಕೊಂಡಿದೆ.

ಬಿಸ್ಲೆರಿ ಇಂಟರ್‌ನ್ಯಾಶನಲ್ ಆವರಣದಿಂದ ‘ಪ್ಯಾಕೇಜ್ಡ್ ಕುಡಿಯುವ ನೀರು (ಖನಿಜಯುಕ್ತ ನೀರನ್ನು ಹೊರತುಪಡಿಸಿ)’ ಮಾದರಿಯನ್ನು ನಿಯಂತ್ರಕ ಪರೀಕ್ಷೆಗಾಗಿ ಸಂಗ್ರಹಿಸಲಾಗಿತ್ತು. ಈ ಮಾದರಿಯು ನಿಗದಿತ ಬ್ರೋಮೇಟ್ ಮಿತಿಯನ್ನು ಪಾಲಿಸಲು ವಿಫಲವಾದ ಕಾರಣ ಅದನ್ನು ಅಸುರಕ್ಷಿತ ಎಂದು ಘೋಷಿಸಲಾಗಿತ್ತು. ಇದನ್ನು ಪ್ರಶ್ನಿಸಿ ಕಂಪನಿಯು ಮೇಲ್ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ, ಹೆಚ್ಚಿನ ಪರೀಕ್ಷೆಗಾಗಿ ಮಾದರಿಯನ್ನು ರೆಫರಲ್ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅಲ್ಲಿನ ಪರೀಕ್ಷೆಯಲ್ಲೂ ನೀರಿನಲ್ಲಿ ‘ಪಾಲಿನ್ಯೂಕ್ಲಿಯರ್ ಆರೊಮ್ಯಾಟಿಕ್ ಹೈಡ್ರೋಕಾರ್ಬನ್‌ಗಳು’ ಇರುವುದು ಪತ್ತೆಯಾಗಿದ್ದು, ಎರಡನೇ ಪ್ರಯೋಗಾಲಯವೂ ನೀರು ಅಸುರಕ್ಷಿತ ಎಂದು ವರದಿ ನೀಡಿದೆ.

ಅಂತಾರಾಷ್ಟ್ರೀಯ ಕ್ಯಾನ್ಸರ್ ಸಂಶೋಧನಾ ಸಂಸ್ಥೆ (ಐಎಆರ್ಸಿ) ಮತ್ತು ಯುಎಸ್ ಇಪಿಎ (ಯುಸ್ ಇಪಿಎ) ಸೇರಿದಂತೆ ಜಾಗತಿಕ ಆರೋಗ್ಯ ಮತ್ತು ಪರಿಸರ ಸಂಸ್ಥೆಗಳು ಬ್ರೋಮೇಟ್ ಹಾಗೂ ಪಿಎಹೆಚ್ (PAHs) ಎರಡನ್ನೂ ಕ್ಯಾನ್ಸರ್ ಕಾರಕ ಅಂಶಗಳೆಂದು ವರ್ಗೀಕರಿಸಿವೆ. ಪ್ರಯೋಗಾಲಯದ ವರದಿಗಳು ಕಾಯ್ದೆಯ ಉಲ್ಲಂಘನೆಯನ್ನು ದೃಢಪಡಿಸಿದ ಹಿನ್ನೆಲೆಯಲ್ಲಿ ಬಿಸ್ಲೆರಿ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ನೀಡಲಾಗಿದೆ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.

Related Articles

Back to top button
error: Content is protected !!