ಜನಮನ
ಶೆಟ್ರಕಟ್ಟೆ ತಿರುವಿನಲ್ಲಿ ಅಪಘಾತಕ್ಕೀಡಾದ ವಿದ್ಯಾರ್ಥಿಗಳಿಗೆ ಕುಂದಾಪುರ ಸರಕಾರಿ ಪ.ಪೂ ಕಾಲೇಜು ವತಿಯಿಂದ ಸಹಾಯ ಧನ
Views: 397
ಕನ್ನಡ ಕರಾವಳಿ ಸುದ್ದಿ: ಇತ್ತೀಚಿಗೆ ತಲ್ಲೂರು -ನೇರಳಕಟ್ಟೆ ರಸ್ತೆಯ ಶೆಟ್ರಕಟ್ಟೆ ತಿರುವಿನಲ್ಲಿ ಸರ್ಕಾರಿ ಬಸ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಹಿತ ಹಲವರಿಗೆ ಗಂಭೀರ ಗಾಯಗಳಾಗಿವೆ.
ಗಂಭೀರ ಗಾಯಗೊಂಡ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಚೈತ್ರಾ ಮತ್ತು ಅರ್ಚನಾ ಅವರಿಗೆ ಕಾಲೇಜು ವತಿಯಿಂದ ಸಹಾಯ ಧನ ನೀಡಲಾಯಿತು.







