ಶ್ರೀಕೃಷ್ಣ ಮಠದಲ್ಲಿ ಹಟ್ಟಿಯಂಗಡಿ ಮೇಳದ ಯಕ್ಷ ಪಂಚಮಿ ಉದ್ಘಾಟನೆ
Views: 63
ಕನ್ನಡ ಕರಾವಳಿ ಸುದ್ದಿ: ನಿರಂತರವಾಗಿ 6 ವರ್ಷಗಳಿಂದ ಉಡುಪಿ ಕೃಷ್ಣ ಮಠದಲ್ಲಿ ಐದು ದಿನಗಳ ಯಕ್ಷಗಾನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿರುವುದು ನಿಜವಾಗಿಯೂ ಹೆಮ್ಮೆಯ ವಿಷಯ. ಶ್ರೀ ಕೃಷ್ಣನ ಕುರಿತಾದ ಯಕ್ಷಾರ್ಚನೆಯನ್ನು ಹಟ್ಟಿಯಂಗಡಿ ಮೇಳದವರು ನಿರ್ವಹಿಸಿಕೊಂಡು ಬರುತ್ತಿದ್ದಾರೆ ಎಂದು ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.
ಅವರು ಉಡುಪಿ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶೀಪಾದರ ಶುಭಾಶೀರ್ವಾದದೊಂದಿಗೆ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್, ಕರ್ನಾಟಕ ಜಾನಪದ ಪರಿಷತ್ತು, ಉಡುಪಿ ಜಿಲ್ಲೆ, ದ್ಯುತಿ ಪರ್ವ ಯಕ್ಷ ಟ್ರಸ್ಟ್, ಕುಂದಾಪುರ ಇವರ ಸಹಕಾರದಿಂದ ರಾಜಾಂಗಣದಲ್ಲಿ ನಡೆಯುತ್ತಿರುವ ಐದು ದಿನಗಳ, “ಯಕ್ಷ ಪಂಚಮಿ” ಯನ್ನು ಉದ್ಘಾಟಿಸಿ ಮಾತನಾಡಿದರು.

ಹಟ್ಟಿಯಂಗಡಿ ಮೇಳದ ಯಜಮಾನರಾದ ವಕ್ವಾಡಿ ರಂಜಿತ್ ಕುಮಾರ್ ಶೆಟ್ಟಿ ಮಾತನಾಡಿ, ಡಾ. ತಲ್ಲೂರು ಶಿವರಾಮ ಶೆಟ್ಟಿ ಯವರು ಆರಂಭಿಸಿದಂದಿನಿಂದ ಇಂದಿನವರೆಗೂ ಬಹಳ ಸಂತೋಷದಿಂದ ಯಕ್ಷ ಪಂಚಮಿಯನ್ನು ಕಲಾವಿದರೂ ಆಚರಿಸಿಕೊಂಡು ಬರುತ್ತಿದ್ದಾರೆ. ಶ್ರೀ ಕೃಷ್ಣನ ಕೃಪೆಯಿಂದ ಇದು ಹೀಗೆಯೇ ನಿರಂತರವಾಗಲೆಂದು ಪ್ರಾರ್ಥಿಸುತ್ತೇವೆ ಎಂದರು.






