ಶ್ರೀ ಶಾರದಾ ಕಾಲೇಜು ಬಸ್ರೂರು:52 ನೇ ವಾರ್ಷಿಕ ಕ್ರೀಡಾಕೂಟ

Views: 87
ಕನ್ನಡ ಕರಾವಳಿ ಸುದ್ದಿ: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ 52 ನೇ ವಾರ್ಷಿಕ ಕ್ರೀಡಾಕೂಟ ಕಾಲೇಜಿನ ಕ್ರೀಡಾಂಗಣದಲ್ಲಿ ನೆಡೆಯಿತು.
ಕಾಲೇಜಿನ ಸಂಚಾಲಕರಾದ ಶ್ರೀ ಬಿ ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅತಿಥಿಗಳಾಗಿ ಶ್ರೀ ವಿಠ್ಠಲ ಶೆಟ್ಟಿ ಕೋರ್ಗಿ ಪರಿಸರವಾದಿ ಮತ್ತು ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವದಿಂದ ಸ್ಪರ್ಧೆಯಲ್ಲಿ ಭಾಗವಹಿಸಿ ಜೀವನದಲ್ಲಿ ಉತ್ತಮ ಸಾಧನೆ ಮಾಡಿ ನೀವು ಕಲಿತ ಸಂಸ್ಥೆಯ ಅಭಿವೃದ್ಧಿಯಲ್ಲಿ ತಮ್ಮನ್ನು ತೋಡಗಿಸಿಕೊಳ್ಳಿ ಎಂದು ಹೇಳಿದರು.
ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ದೈಹಿಕ ಶಿಕ್ಷಕರಾದ ಶ್ರೀ ರಾಘವೇಂದ್ರ ಕಂಡ್ಲೂರ್ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಲ್ಲಿ ಇರುವಾಗ ಸಾಧಿಸಲು ಅನೇಕ ಅವಕಾಶಗಳು ಇವೆ, ಕ್ರೀಡೆಯಲ್ಲಿ ಉದ್ಯೋಗ ಅವಕಾಶಗಳು ಸಾಕಷ್ಟಿವೆ ಸಾಧಿಸುವ ಛಲ ನೀಮಗಿರಲಿ ಎಂದರು.
ಕಾಲೇಜು ಆಡಳಿತ ಮಂಡಳಿ ಸದಸ್ಯರಾದ ಶ್ರೀಮತಿ ಅನುಪಮ ಶೆಟ್ಟಿ ಹಾಗೂ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಶ್ರೀ ನಾರಾಯಣ ಪೈ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಡಾ ಚಂದ್ರಾವತಿ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಸೂರಜ್ ಕುಮಾರ್ ಶೆಟ್ಟಿ ವಂದಿಸಿದರು. ಇತಿಹಾಸ ಉಪನ್ಯಾಸಕರಾದ ಶ್ರೀ ರಾಘವೇಂದ್ರ ಶೆಟ್ಟಿ ನಿರೂಪಿಸಿದರು.