ಶಿಕ್ಷಣ

ಶ್ರೀ ಶಾರದಾ ಕಾಲೇಜು ಬಸ್ರೂರು: ಎನ್ಎಸ್ಎಸ್ ಶಿಬಿರ ಸಮಾರೋಪ

Views: 50

ಕನ್ನಡ ಕರಾವಳಿ ಸುದ್ದಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸುಳುಗೋಡು ಹಳ್ಳಿ ಹೊಳೆ ಇಲ್ಲಿ ನಡೆದ ಶ್ರೀ ಶಾರದಾ ಕಾಲೇಜು ಬಸ್ರೂರು ಇದರ ಏಳು ದಿನಗಳ ರಾಷ್ಟ್ರೀಯ ಸೇವಾ ಯೋಜನಾ ವಿಶೇಷ ವಾರ್ಷಿಕ ಶಿಬಿರ ಸಂಪನ್ನಗೊಂಡಿತು.

ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದ ಶ್ರೀ ಶಾರದಾ ಕಾಲೇಜು ಬಸ್ರೂರಿನ ನಿವೃತ್ತ ಸಹ ಪ್ರಾಧ್ಯಾಪಕರಾದ ಶ್ರೀ ಎಚ್.ಜಗದೀಶ್ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ಜೊತೆಗೆ ಜೀವನ ಪಾಠವನ್ನು ಕಲಿಯಲು ಸಾಧ್ಯ, ಹಾಗೆ ಈ ಶಿಬಿರದಲ್ಲಿ ಭಾಗವಹಿಸಿರುವ ವಿದ್ಯಾರ್ಥಿಗಳು ಜೀವನದಲ್ಲಿ ಸೋಲುವುದಿಲ್ಲ ಮತ್ತು ಇಲ್ಲಿ ಕಲಿತಿರುವ ಒಳ್ಳೆಯ ವಿಚಾರಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಿ ಎಂದು ಕರೆ ನೀಡಿದರು.

ಸಭಾಧ್ಯಕ್ಷತೆಯನ್ನು ಶ್ರೀ ಶಾರದಾ ಕಾಲೇಜು ಬಸ್ರೂರು ಇದರ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ವಹಿಸಿದ್ದರು. 

ಮುಖ್ಯ ಅತಿಥಿಗಳಾಗಿ ಶ್ರೀ ಮಂಜುನಾಥ್ ಶೆಟ್ಟಿ ಅಧ್ಯಕ್ಷರು ಗ್ರಾಮ ಪಂಚಾಯತ್ ಹಳ್ಳಿಹೊಳೆ, ಶ್ರೀ ಶ್ರೀನಿವಾಸ್ ಆಚಾರಿ ಅಧ್ಯಕ್ಷರು ಎಸ್ ಡಿ ಎಮ್ ಸಿ ಸುಳುಗೋಡು, ಶ್ರೀ ಶಾರದಾ ಕಾಲೇಜಿನ ಆಡಳಿತ ಅಧಿಕಾರಿ ಮತ್ತು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೋಹನ್ ಕೆ ಎನ್, ಶ್ರೀಮತಿ ಉಷಾಲತಾ ಮುಖ್ಯೋಪಾಧ್ಯಾಯರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಳುಗೋಡು, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ಶಿವರಾಮ್ ಪೂಜಾರಿ, ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷರಾದ ಜಯರಾಮ್ ಪೂಜಾರಿ, ಶ್ರೀ ಸುಬ್ರಾಯ ಕನ್ನಂತ , ಶ್ರೀಮತಿ ಉಷಾ ಎಸ್ ಡಿ ಎಂ ಸಿ ಸದಸ್ಯರು, ಶ್ರೀಮತಿ ಪಲ್ಲವಿ ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು. 

ಶಿಬಿರದ ಶಹ ಶಿಬಿರಾಧಿಕಾರಿ ಕುಮಾರಿ ಮನವಿ ಕೆಕೆ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿ ಡಾ. ರವಿಚಂದ್ರ ವಂದಿಸಿದರು. ಉಪನ್ಯಾಸಕ ಅಕ್ಷಯ್ ಹೆಗಡೆ ಮೊಳಹಳ್ಳಿ ನಿರೂಪಿಸಿದರು.

Related Articles

Back to top button
error: Content is protected !!