ಇತರೆ

ಸಂಘ ನೋಂದಣಿಗಾಗಿ ಲಂಚ ಬೇಡಿಕೆಯಿಟ್ಟ ಅಧಿಕಾರಿಗಳಿಬ್ಬರು ರೆಡ್ ಹ್ಯಾಂಡ್ ಅರೆಸ್ಟ್ 

Views: 66

ಕನ್ನಡ ಕರಾವಳಿ ಸುದ್ದಿ:ಸಂಘ ನೋಂದಣಿ ಮಾಡುವುದಕ್ಕಾಗಿ ಲಂಚದ ಬೇಡಿಕೆಯಿಟ್ಟು, 5 ಸಾವಿರ ರೂಪಾಯಿ ಹಣ ಪಡೆಯುತ್ತಿರುವಾಗಲೇ ಅಧಿಕಾರಿಗಳಿಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ  ಸೇಡಂ ಪಟ್ಟಣದಲ್ಲಿ ನಡೆದಿದೆ.

ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ಮಲ್ಲಿಕಾರ್ಜುನ್ ಹಾಗೂ ಕಂಪ್ಯೂಟ‌ರ್ ಆಪರೇಟರ್ ಸಂಗೀತಾ ಎಂಬಾತರೆ ಲೋಕಾಯುಕ್ತರ ಬಲೆಗೆ ಬಿದ್ದಿರುವ ಅಧಿಕಾರಿಗಳಾಗಿದ್ದಾರೆ.

ಶ್ರೀ ಬೀರಲಿಂಗೇಶ್ವರ ಹೊಸ ಕೋಳಿ ಸಾಕಾಣಿಕೆ ಮಾಡೋದಕ್ಕೆ ಹಾಗೂ ಮಾರಾಟಗಾರರ ಸಹಕಾರಿ ಸಂಘದ ನೋಂದಣಿಗೆ ಅಧಿಕಾರಿ ಮಲ್ಲಿಕಾರ್ಜುನ್ ಅವರು 10 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು. ಈ ಕುರಿತು ಬೀರಪ್ಪ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ ಮೇರೆಗೆ ಲೋಕಾ ಪೊಲೀಸರು ದಾಳಿ ನಡೆಸಿ, ಲಂಚ ಪಡೆಯುತ್ತಿದ್ದ ನಿಬಂಧಕ ಹಾಗೂ ಕಂಪ್ಯೂಟ‌ರ್ ಆಪರೇಟರ್ ರನ್ನು ವಶಕ್ಕೆ ಪಡೆದಿದ್ದಾರೆ.

ಕಲಬುರಗಿ ಲೋಕಾಯುಕ್ತ ಎಸ್ಪಿ ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೀತಾ ಬೆನಾಳ್ ಹಾಗೂ ಪೊಲೀಸ್ ಇನ್ಸೆಕ್ಟರ್ ಅರುಣ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಈ ವೇಳೆ ಸಿಬ್ಬಂದಿ ಮಲ್ಲಿನಾಥ ಸೇರಿದಂತೆ ಮತ್ತಿತರರು ಇದ್ದರು.

Related Articles

Back to top button
error: Content is protected !!