ರಾಜಕೀಯ

ಸಂಸತ್ತಿನ ಭದ್ರತಾ ಲೋಪ,ಕಲಾಪಕ್ಕೆ ಅಡ್ಡಿ: ಇನ್ನೂ 49 ಸಂಸದರ ಅಮಾನತು

Views: 0

ನವದೆಹಲಿ, ಸಂಸತ್ತಿನ ಭದ್ರತಾ ಲೋಪ ಕುರಿತಂತೆ ಸದನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಉತ್ತರ ನೀಡಬೇಕು ಎಂದು ಆಗ್ರಹಿಸಿ ಇಂಡಿಯಾ ಮೈತ್ರಿಕೂಟದ ಸದಸ್ಯರು ಉಭಯ ಸದನಗಳಲ್ಲಿ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದಕ್ಕೆ ಪ್ರತೀಕಾರವಾಗಿ ಚಳಿಗಾಲದ ಉಳಿದ ಅಧಿವೇಶನಕ್ಕೆ ಹಾಜರಾಗಂತೆ 141 ಸದಸ್ಯರನ್ನು ಅಮಾನತು ಮಾಡಿರುವ ಕ್ರಮ ವಿರೋಧ ಪಕ್ಷಗಳ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಇಂದು ಕೂಡ ಇಂಡಿಯಾ ಮೈತ್ರಿಕೂಟದ ಸದಸ್ಯರು ಪ್ರತಿಭಟನೆ ನಡೆಸಿದರು. ನಿನ್ನೆ 79 ಮಂದಿ ಅಮಾನತು ಮಾಡಲಾಗಿತ್ತು ಇಂದು ನ್ಯಾಷನಲ್ ಕಾನ್ಪರೆನ್ಸ್ ಮುಖ್ಯಸ್ಥ ಫಾರುಕ್ ಅಬ್ದುಲ್ಲಾ, ಕಾಂಗ್ರೆಸ್‌ನ ಶಶಿ ತರೂರ್, ಕಾರ್ತಿ ಚಿದಂಬರಮ್, ಕೀರ್ತಿ ಅಜಾದ್, ಎನ್ ಸಿಪಿಯ ಸುಪ್ರಿಯಾ ಸುಳೆ, ಸಮಾಜವಾದಿ ಪಕ್ಷದ ಡಿಂಪಲ್ ಯಾದವ್ ಸೇರಿದರೆ 49ಸಂಸದರನ್ನು ಅಮಾನತ್ತು ಮಾಡಿದ್ದು ಇದರೊಂದಿಗೆ ಅಮಾನತ್ತಾದ ಸದಸ್ಯರ ಸಂಖ್ಯೆ 141ಕ್ಕೆ ಏರಿಕೆಯಾಗಿದೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ಸಂಸದರು ಘೋಷಣೆ ಮತ್ತು ಭಿತ್ತಿ ಪತ್ರ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ವಿರುದ್ದ ಮಾತಿನ ಚಕಮಕಿ ಗದ್ದಲ ನಡೆದ ಹಿನ್ನೆಲೆಯಲ್ಲಿ ಕಲಾಪವನ್ನು ಮದ್ಯಾಹ್ನದವರೆಗೆ ಮುಂದೂಡಲಾಗಿದೆ.

ಸದನದಲ್ಲಿ ಭಿತ್ತಿ ಪತ್ರ ಪ್ರದರ್ಶನ ಮಾಡಿದ ಸದಸ್ಯರ ವರ್ತನೆಯನ್ನು ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರು ತೀವ್ರವಾಗಿ ಖಂಡಿಸುವ ಮೂಲಕ ಬಿತ್ತಿಪಫಲಕ ಪ್ರದರ್ಶಿಸಿದ ಸದಸ್ಯರಿಗೆ ಈ ರೀತಿ ಮಾಡಿದರೆ ಸರಿ ಇರುವುದಿಲ್ಲ ಎಂದು ನೇರ ಎಚ್ಚರಿಕೆ ನೀಡಿದ್ದಾರೆ.

ಸಂಸತ್ತಿನ ಉಳಿದ ಕಲಾಪಕ್ಕೆ ಹಾಜರಾಗದಂತೆ 141 ಸದಸ್ಯರನ್ನು ಅಮಾನತ್ತು ಮಾಡಿರುವ ಕ್ರಮವನ್ನು ವಿರೋಧಿಸಿ ಕಲಾಪವನ್ನು ರಾಜ್ಯಸಭೆಯ ವಿರೋದ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಎನ್ ಸಿಪಿ ಮುಖ್ಯಸ್ಥ ಶರದ್ ಯಾದವ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಎಲ್ಲಾ ನಾಯಕರು ಸಂಸತ್ ಹೊರ ಭಾಗದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ನಡೆಗೆ ತೀವ್ರ ಆಕ್ರೋಶ, ಅತೃಪ್ತಿ ವ್ಯಕ್ತಪಡಿಸಿದರು.

ಮತ್ತೊಂಡೆ ವಿರೋಧ ಪಕ್ಷದ ಸಂಸದರು ಅದರಲ್ಲಿಯೂ ಅಮಾನತ್ತು ಗೊಂಡ ಸಂಸದರು ಮಕರ ದ್ವಾರದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನಡೆಯನ್ನು ತೀವ್ರವಾಗಿ ವಿರೋಧಿಸಿದರು.

ವಿರೋಧ ಪಕ್ಷದ ಸಂಸದರು ಮತ್ತು ಇಂಡಿಯಾ ಬ್ಲಾಕ್ ಸಭೆ ಮುಂದೂಡಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು. ಇದಕ್ಕೂ ಮುನ್ನ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಛೇರಿಯಲ್ಲಿ ಸಭೆ ನಡೆಸಿ ಹೋರಾಟ ನಡೆಸಲು ನಿರ್ಧರಿಸಿದರು.

ಸಮಾಜವಾದಿ ಪಕ್ಷದ ಸಂಸದ ರಾಮ್ ಗೋಪಾಲ್ ಯಾದವ್ ಮಾತನಾಡಿ “ಸಂಸದರನ್ನು ಅಮಾನತುಗೊಳಿಸುತ್ತಿರುವ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಕೇಂದ್ರ ಸರ್ಕಾರ ಮೂರ್ಖರ ಸ್ವರ್ಗದಲ್ಲಿ ವಾಸಿಸುತ್ತಿದ್ದಾರೆ ಎಂದು ಭಾವಿಸಿದಂತೆ ಇದೆ” ಎಂದಿದ್ದಾರೆ.

ಎಎಪಿ ಸಂಸದ ರಾಘವ್ ಚಡ್ಡಾ ಮಾತನಾಡಿ “ಬಿಜೆಪಿ ಯಾರಿಗಾದರೂ ಹೆದರುತ್ತಿದ್ದರೆ, ಅದು ಅರವಿಂದ್ ಕೇಜ್ರಿವಾಲ್ ಅವರಿಗೆ ಮಾತ್ರ. ಸಂಸದರ ಅಮಾನತು, ಭಾರತದ ಪ್ರಜಾಪ್ರಭುತ್ವದಲ್ಲಿ ಇದು ಕರಾಳ ದಿನ. ಸಂಸದರನ್ನು ಅಮಾನತುಗೊಳಿಸಲಾಗಿದೆ ಎಂದು ನಾನು ಹೇಳುವುದಿಲ್ಲ ಆದರೆ ಪ್ರಜಾಪ್ರಭುತ್ವವನ್ನು ಅಮಾನತುಗೊಳಿಸಲಾಗಿದೆ ಎಂದರು

ಸಂಸತ್ತಿನಿಂದ ಅಮಾನತ್ತು ಮಾಡಿರುವ ಕ್ರಮ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ :ಖರ್ಗೆ ವಾಗ್ದಾಳಿ

ಇಂಡಿಯಾ ಮೈತ್ರಿಕೂಟದ 141 ಸದಸ್ಯರನ್ನು ಸಂಸತ್ತಿನಿಂದ ಅಮಾನತ್ತು ಮಾಡಿರುವ ಕ್ರಮ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ವಿರೋಧ ಪಕ್ಷಗಳ ಸದಸ್ಯರನ್ನು ಅಮಾನತ್ತು ಮಾಡಿರುವ ಕ್ರಮವನ್ನು ಖಂಡಿಸಿ ಗಾಂಧಿ ಪ್ರತಿಮೆ ಬಳಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ವಿರೋಧ ಪಕ್ಷಗಳ ಸದಸ್ಯರನ್ನು ಎದುರಿಸಲಾಗದೆ ಅವರನ್ನು ಅಮಾನತ್ತು ಮಾಡುವ ಕ್ರಮ ಪ್ರಜಾಪ್ರಭುತ್ವಕ್ಕೆ ಮಾರಕ ಎಂದಿದ್ದಾರೆ.

Related Articles

Back to top button
error: Content is protected !!