ರಾಜಕೀಯ
ಸಂಸದ ತೇಜಸ್ವಿ ಸೂರ್ಯ ಹಾಗೂ ಗಾಯಕಿ ಶಿವಶ್ರೀ ವಿವಾಹ, ಆರತಕ್ಷತೆ ಯಾವಾಗ?

Views: 58
ಕನ್ನಡ ಕರಾವಳಿ ಸುದ್ದಿ: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ವಿವಾಹ ಶಿವಶ್ರೀ ಸ್ಕಂದಪ್ರಸಾದ್ ಅವರೊಂದಿಗೆ ನಿಗದಿಯಾಗಿದೆ.
ಇದೀಗ ತೇಜಸ್ವಿ ಸೂರ್ಯ ಅವರ ವಿವಾಹದ ದಿನಾಂಕ ಹೊರಬಿದ್ದಿದೆ. ಜೋಡಿ ಯಾವಾಗ ಮದುವೆಯಾಗಲಿದ್ದಾರೆ, ಆರತಕ್ಷತೆ ಎಲ್ಲಿ ನಡೆಯಲಿದೆ ಎಂಬೆಲ್ಲಾ ಮಾಹಿತಿ ಇಲ್ಲಿದೆ.
ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಸ್ಕಂದಪ್ರಸಾದ್ ಅವರ ವಿವಾಹ ಸಮಾರಂಭ ಇದೇ ಮಾರ್ಚ್ 9 ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯಲಿದೆ. ಈ ವಿವಾಹ ಸಮಾರಂಭಕ್ಕೆ ಕೇವಲ ಕುಟುಂಬಸ್ಥರಿಗೆ, ಅತ್ಯಾಪ್ತರಿಗೆ, ಕೆಲವೇ ಸ್ನೇಹಿತರಿಗೆ ಮಾತ್ರ ಆಹ್ವಾನ ನೀಡಲಾಗಿದೆ.
ಮದುವೆಗೆ ಹಾಗೂ ಆರತಕ್ಷತೆ ಎರಡಕ್ಕೂ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಸೇರಿದತೆ ಇತರ ಗಣ್ಯ ವ್ಯಕ್ತಿಗಳನ್ನು ಆಹ್ವಾನಿಸಲಾಗಿದೆ ಎನ್ನಲಾಗಿದೆ.