ರಾಜಕೀಯ

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು, ಜೈಲು ಗ್ಯಾರಂಟಿ..! 

Views: 90

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಕೇಸಲ್ಲಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಕ್ರೈಮ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 376(2), 506, 354(A) , 354(B), 354(C) ಅಡಿಯಲ್ಲಿ ಎಫ್ಐಆರ್ ಮಾಡಲಾಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರು ದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈಗಾಗಲೇ ಎಸ್ಐಟಿ ಅಧಿಕಾರಿಗಳು ಹಾಸನ ಅಶ್ಲೀಲ ವಿಡಿಯೋ ಕೇಸ್ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ಸಂಬಂಧ ಹಲವರ ಹೇಳಿಕೆಯನ್ನು ಕೂಡ ದಾಖಲಿಸಿದ್ದಾರೆ. ಇದರ ಮಧ್ಯೆ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದ್ದು, ಮಾಜಿ ಸಚಿವ ರೇವಣ್ಣನ ಮಗನಿಗೆ ಜೈಲು ಗ್ಯಾರಂಟಿ ಆಗಿದೆ.

ಈ ಬಗ್ಗೆ ಪ್ರಜ್ವಲ್ ರೇವಣ್ಣರ ಪ್ರಕರಣದ ಸತ್ಯಾಂಶ ಹೊರ ಬರಲಿದೆ ಇವರ ವಿರುದ್ಧ ಇಡೀ ದೇಶಾದ್ಯಂತ ಎಲ್ಲೆಡೆ ಮಹಿಳಾ ಪರ ಹೋರಾಟಗಾರರು ಮತ್ತು ವಿರೋಧ ಪಕ್ಷಗಳು ಮುಗಿಬಿದ್ದಿವೆ.

Related Articles

Back to top button
error: Content is protected !!