ಇತರೆ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರನ ಕಾರು ಚಾಲಕನಿಗೆ ಚೂರಿ ಇರಿದು ಎಸ್ಕೇಪ್‌

Views: 78

ಕನ್ನಡ ಕರಾವಳಿ ಸುದ್ದಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳಕರ್ ಅವರ ಕಾರ್ ಚಾಲಕ ಬಸವಂತ ಕಡೋಲ್ಕರ್‌ಗೆ ಚಾಕು ಇರಿಯಲಾಗಿದೆ. ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಕಾರ್ ನಿಲ್ಲಿಸಿಕೊಂಡು ನಿಂತಿದ್ದ ಬಸವಂತ ಕಡೋಲ್ಕರ್ (32) ಮೇಲೆ ಚಾಕುವಿನಿಂದ ದುಷ್ಕರ್ಮಿಗಳು ದಾಳಿ ನಡೆಸಿ ಪರಾರಿಯಾಗಿದ್ದಾರೆ.

ಕಾರು ನಿಲ್ಲಿಸಿ ಕೆಳಗೆ ನಿಂತಿದ್ದವನ ಮೇಲೆ ದಾಳಿಯಾಗಿದೆ. ಬೈಕ್ ಮೇಲೆ ಬಂದು ಇಬ್ಬರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಎದೆ, ಭುಜ, ತೊಡೆ ಸೇರಿ ನಾಲ್ಕು ಕಡೆ ಚಾಕುವಿನಿಂದ ಇರಿದು ಹತ್ಯೆ ಯತ್ನ ಮಾಡಿದ್ದಾರೆ. ಗಾಯಗೊಂಡ ಬಸವಂತಗೆ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗೆ ಡಿಸಿಪಿ, ಎಸಿಪಿ ಹಾಗೂ ಮೃಣಾಲ್‌ ಹೆಬ್ಬಾಳ್ಕರ್ ಆಗಮಿಸಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹತ್ಯೆ ಯತ್ನದ ಘಟನೆ ನಡೆದಿದೆ.

Related Articles

Back to top button
error: Content is protected !!