ರಾಜಕೀಯ

ಸಚಿವ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ

Views: 34

ಕನ್ನಡ ಕರಾವಳಿ ಸುದ್ದಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ/ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರು ತನ್ನ ಸಚಿವ ಸ್ಥಾನಕ್ಕೆ ಶುಕ್ರವಾರ (ಆ.28) ರಾಜೀನಾಮೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ತಾನು ತನ್ನ ಸ್ಥಾನಕ್ಕೆ ರಾಜೀನಾಮೆಯನ್ನು ನೀಡುವುದಾಗಿ ತಿಳಿಸಿದ್ದಾರೆ, “ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಉದ್ದೇಶದಿಂದ ಸ್ವಯಂಪ್ರೇರಿತನಾಗಿ ರಾಜೀನಾಮೆ ನೀಡುತ್ತಿದ್ದೇನೆ. ತನಿಖೆಯಲ್ಲಿ ನನ್ನ ಮೇಲಿನ ಆರೋಪ ಸುಳ್ಳು ಎಂದು ಸಾಬೀತಾಗಿ, ನಾನು ನಿರ್ದೋಷಿಯಾಗಿ ಹೊರಬರುವ ವಿಶ್ವಾಸವಿದೆ” ಎಂದು ಅವರು ತಿಳಿಸಿದ್ದಾರೆ.

ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ ಪ್ರತಿಭಟನೆ ನಡೆಸಿ ಸಚಿವರ ರಾಜೀನಾಮೆಗೆ ಪಟ್ಟು ಹಿಡಿದಿದ್ದವು.

ಪ್ರಕರಣದ ಕುರಿತು ತನಿಖಾ ಸಂಸ್ಥೆಗಳ ತನಿಖೆ ತೀವ್ರಗೊಂಡ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ನಾಗೇಂದ್ರ ಅವರು ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ.

Related Articles

Back to top button
error: Content is protected !!