ರಾಜಕೀಯ
ಸಚಿವ ಸ್ಥಾನಕ್ಕೆ ಕೆ.ಎನ್. ರಾಜಣ್ಣ ರಾಜೀನಾಮೆ

Views: 134
ಕನ್ನಡ ಕರಾವಳಿ ಸುದ್ದಿ: ಸಹಕಾರ ಸಚಿವ ಸ್ಥಾನಕ್ಕೆ ಕೆ.ಎನ್. ರಾಜಣ್ಣ ಇಂದು ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆಯ ಮೇರೆಗೆ ರಾಜಣ್ಣ ರಾಜೀನಾಮೆ ನೀಡಿದ್ದಾರೆಂದು ಹೇಳಲಾಗಿದೆ.
ಮತ ಕಳ್ಳತನದ ಬಗ್ಗೆ ಹೇಳಿಕೆ ನೀಡಿದ್ದರು. ಇದು ಹೈಕಮಾಂಡ್ ಆಸಮಾಧಾನಕ್ಕೆ ಕಾರಣವಾಗಿತ್ತು. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಚವೇ ಅಧಿಕಾರದಲ್ಲಿತ್ತು. ಮಹದೇವಪುರದಲ್ಲಿ ಮತಗಳ್ಳತನವಾಗಿರುವುದಕ್ಕೆ ನಮ್ಮ ಲೋಪವೆ ಕಾರಣ ಎಂದು ಹೇಳಿಕೆ ನೀಡಿದ್ದರು.ಈ ಹೇಳಿಕೆಯನ್ನು ಪಕ್ಷದ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿತ್ತು. ರಾಜಣ್ಣ ಅವರಿಂದ ರಾಜೀನಾಮೆ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚಿಸಿತ್ತು.ವಿಧಾನಸಭಾ ಕಲಾಪ ಸಲಹಾ ಸಮಿತಿ ಸಭೆ ನಡೆಯುತ್ತಿದ್ದಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.ರಾಜೀನಾಮೆ ನೀಡಿರುವುದನ್ನು ಖಚಿತಪಡಿಸಿರುವ ರಾಜಣ್ಣ, ತಾವು ಮುಖ್ಯಮಂತ್ರಿಯನ್ನು ಭೇಟಿ ಮಾಡುವುದಾಗಿ ತಿಳಿಸಿದರು.






