ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬಿ.ನಾಗೇಂದ್ರ?
Views: 37
ಕನ್ನಡ ಕರಾವಳಿ ಸುದ್ದಿ: ವಾಲ್ಮೀಕಿ ನಿಗಮದಲ್ಲಿ ಭಾರೀ ಹಗರಣದ ಆರೋಪ ಹೊತ್ತಿರುವ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ನಿರಂತರ ಒತ್ತಡ ಹಾಕುತ್ತಿವೆ. ಇತ್ತೀಚಿನ ವಿಧಾನಮಂಡಲದ ಮಳೆಗಾಲದ ಅಧಿವೇಶನಕ್ಕೂ ಅಡ್ಡಿಯಾಗಿ ನಿಗದಿತ ದಿನಕ್ಕಿಂತ ಮೂರು ದಿನ ಮೊದಲೇ ಮೊಟಕುಗೊಳಿಸಲಾಗಿತ್ತು. ಇದೀಗ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆಗೆ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.
ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಲು ಮುಂದಾಗಿದ್ದು, ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಚರ್ಚಿಸಿದ್ದಾರೆ ಎನ್ನಲಾಗಿದೆ. ನನ್ನನ್ನು ಅನಗತ್ಯವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ನನ್ನಿಂದ ಪಕ್ಷಕ್ಕೆ ಮುಜುಗರ ಆಗೋದು ಬೇಡ ಎಂದು ನಾಗೇಂದ್ರ ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಸಿಎಂ ಜೊತೆಗೆ 15 ನಿಮಿಷಗಳ ಕಾಲ ಸಚಿವ ನಾಗೇಂದ್ರ ದೂರವಾಣಿ ಸಂಭಾಷಣೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಹೈಕಮಾಂಡ್ ಜೊತೆ ಚರ್ಚಿಸಿ ತಿಳಿಸುವುದಾಗಿ ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ, ಹೈಕಮಾಂಡ್‌ನೊಂದಿಗೆ ಚರ್ಚಿಸುವವರೆಗೆ ಯಾವುದೇ ನಿರ್ಧಾರ ಕೈಗೊಳ್ಳದಂತೆ ಮುಖ್ಯಮಂತ್ರಿಗಳು ನಾಗೇಂದ್ರ ಅವರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.






