ಶಿಕ್ಷಣ

ಸಮಗ್ರ ಶಿಕ್ಷಣಕ್ಕೆ ಮನೆಮಾತಾದ ಜಾಗತಿಕ ಮಟ್ಟದ ಶಿಕ್ಷಣ ಸಂಸ್ಥೆ- ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ

--ಹೆಮ್ಮಾಡಿಯಲ್ಲಿ ಜನತಾ ಕ್ರಾಂತಿ  ---ಕುಂದಾಪುರ ಮತ್ತು ಬೈಂದೂರು ತಾಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆ ---ಸಿಇ ಟಿ, ನೀಟ್, ಜೆ ಇಇ, ನಾಟ, ಸಿಎ, ಸಿಎಸ್ ಪರೀಕ್ಷೆ ತರಬೇತಿಗೆ ಜನತಾ ಅಗ್ರಸ್ಥಾನ

Views: 101

ಹೆಮ್ಮಾಡಿಯಲ್ಲಿ ಜನತಾ ಕ್ರಾಂತಿ

ಕನ್ನಡ ಕರಾವಳಿ ಸುದ್ದಿ”ಶಿಕ್ಷಣ ಭಾರತದ ಗ್ರಾಮೀಣ ಪ್ರದೇಶಗಳನ್ನು ತಲುಪಬೇಕು.ದೇಶದ ಪ್ರತಿ ವಿದ್ಯಾರ್ಥಿಯೂ ತನ್ನ ಗುರಿಯನ್ನು ಸಾಧಿಸುವಂತಾಗಬೇಕು” ಎಂಬ ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ರವರ ನುಡಿಯಂತೆ ಸಮಾಜದ ಸಮಗ್ರ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಪ್ರಮುಖವಾದದ್ದು.

ಸ್ಪರ್ಧಾತ್ಮಕ‌ ಜಗತ್ತಿನ ವೇಗದ ಜೊತೆಗೆ ಹೆಜ್ಜೆ ಹಾಕಲು ಇಂದಿನ ಯುವ ಪೀಳಿಗೆಗೆ ಸ್ಪರ್ಧಾತ್ಮಕತೆಗೆ ಅನುಗುಣವಾಗಿ ಭವಿಷ್ಯವನ್ನು ರೂಪಿಸಿಕೊಳ್ಳಲು ಕುಂದಾಪುರ ತಾಲೂಕಿನ ಹೆಮ್ಮಾಡಿಯ ಹೃದಯ ಭಾಗದಲ್ಲಿ

ಪ್ರಕೃತಿ ರಮಣೀಯ ಪರಿಸರದಲ್ಲಿ ಮೈ ತಳೆದು ನಿಂತಿರುವ, ಅತ್ಯಾಕರ್ಷಣೀಯವಾದ ಭವ್ಯವಾದ ಕಟ್ಟಡದೊಂದಿಗೆ ದಕ್ಷ ಆಡಳಿತ ಮಂಡಳಿ,ಅನುಭವಿಶಾಲಿ ಪ್ರಾಂಶುಪಾಲರು, ಹಾಗೂ ಉಪನ್ಯಾಸಕ ವೃಂದದವರಿಂದ ಸಮ್ಮಿಳಿತಗೊಂಡ ಸಂಸ್ಥೆಯೇ ಜನತಾ ಪದವಿಪೂರ್ವ ಕಾಲೇಜು.

ಶ್ರೀ,ವಿ.ವಿ.ವಿ ಮಂಡಳಿ(ರಿ)ಆಡಳಿತ ಮಂಡಳಿಯವರಿಂದ 2007-08ರಲ್ಲಿ ಪ್ರಾರಂಭಗೊಂಡ ಜನತಾ ಪದವಿಪೂರ್ವ ಕಾಲೇಜನ್ನು ಶ್ರೀ ವಿ.ವಿ.ವಿ.ಮಂಡಳಿಯವರು ಹಲವು ವರ್ಷಗಳ ಕಾಲ ಮುನ್ನಡೆಸಿದರು.2022-23ನೇ ಶೈಕ್ಷಣಿಕ ವರ್ಷದಿಂದ ಸಮರ್ಪಣಾ ಎಜುಕೇಶನಲ್ ಟ್ರಸ್ಟ್ (ರಿ)ಹೆಮ್ಮಾಡಿ ನೂತನ ಆಡಳಿತ ಮಂಡಳಿಯವರು ಕಾಲೇಜನ್ನು ಮುನ್ನಡೆಸುತ್ತಿದ್ದಾರೆ.

ಕಾಲೇಜು ಆಡಳಿತ ಮಂಡಳಿ

ಸಮರ್ಪಣಾ ಎಜುಕೇಶನಲ್ ಟ್ರಸ್ಟ್‌ (ರಿ) ಶೀರ್ಷಿಕೆಯಡಿಯಲ್ಲಿ ಆರಂಭವಾದ ಕಾಲೇಜು‌ .

ಅನುಭವಿಶಾಲಿ ಹಾಗೂ ಬೋಧನೆಯಲ್ಲಿ ಸಾಕಷ್ಟು ವರ್ಷಗಳ ಅನುಭವವಿರುವ ಶಿಕ್ಷಣ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪುರಸ್ಕೃತರಾದ ಗಣೇಶ ಮೊಗವೀರರವರು,ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳಲ್ಲಿ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಿ ಪ್ರಸಿದ್ಧಿ ಪಡೆದಿರುವ ಶ್ರೀಮತಿ ಚಿತ್ರಾ ಕಾರಂತ್ ರವರ ಮಾರ್ಗದರ್ಶನದಡಿಯಲ್ಲಿ ಆರಂಭಿಸಿದ ಕಾಲೇಜು ಇದಾಗಿದ್ದು, ಗ್ರಾಮೀಣ ಭಾಗದಲ್ಲಿ ಉತ್ತಮ ಶಿಕ್ಷಣ ನೀಡುವ ಸದಾಶಯದೊಂದಿಗೆ ಸಮರ್ಪಣಾ ಎಜುಕೇಶನಲ್ ಟ್ರಸ್ಟ್ (ರಿ) ಎನ್ನುವ ಆಡಳಿತ ಮಂಡಳಿಯನ್ನು ರಚಿಸಿಕೊಂಡಿರುತ್ತಾರೆ.

ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರು ಶ್ರೀ ಗಣೇಶ ಮೊಗವೀರರವರು ಹಾಗೂ ಕಾರ್ಯದರ್ಶಿಯಾಗಿ ಶ್ರೀಮತಿ ಶ್ಯಾಮಲ ಗಣೇಶ್ ರವರು ಕಾರ್ಯನಿರ್ವಹಿಸುತ್ತಿದ್ದಾರೆ.

ಶಿಕ್ಷಣಕ್ಕಾಗಿ ನಿರಂತರ ಬದ್ಧತೆಯನ್ನು ಕಾಯ್ದುಕೊಳ್ಳುವ ಉದ್ದೇಶವನ್ನಿಟ್ಟುಕೊಂಡು ಆರಂಭವಾದ ಕಾಲೇಜು

ಪದವಿಪೂರ್ವ ಹಂತದಲ್ಲಿ 2022-23ನೇ ಶೈಕ್ಷಣಿಕ ವರ್ಷದಿಂದ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ.ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಶಿಕ್ಷಣ ನೀಡುತ್ತಾ ರಾಜ್ಯದ ಗಮನ ಸೆಳೆದಿದೆ.ವಿಜ್ಞಾನ ವಿಭಾಗದಲ್ಲಿ PCMB,PCMC ಹಾಗೂ ವಾಣಿಜ್ಯ ವಿಭಾಗದಲ್ಲಿ CEBA,SEBA ಪಠ್ಯಕ್ರಮ ವಿಭಾಗಗಳನ್ನು ಹೊಂದಿದೆ.

ಶಿಸ್ತು,ಅಚ್ಚುಕಟ್ಟುತನ,ಗುಣಮಟ್ಟದ ಹಾಗೂ ಮೌಲ್ಯಯುತ ಶಿಕ್ಷಣ ಮಕ್ಕಳ ಆಂತರ್ಯದಲ್ಲಿ ಬಿತ್ತುವ ಮೂಲಕ ಸ್ಪರ್ಧಾತ್ಮಕ ಯುಗಕ್ಕೆ ಅನುಗುಣವಾಗಿ ಶಿಕ್ಷಣ ನೀಡಲಾಗುತ್ತಿದೆ.

ಮೌಲ್ಯಯುತ ಶಿಕ್ಷಣವನ್ನು ನೀಡುವುದರ ಜೊತೆ- ಜೊತೆಗೆ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಯ ಉದ್ದೇಶವನ್ನಿಟ್ಟು ಕೊಂಡು ಅನೇಕ ಸೃಜನಶೀಲ ಚಟುವಟಿಕೆಗಳನ್ನು ಆಯೋಜನೆ ಮಾಡಲಾಗುತ್ತಿದೆ.

ವಿದ್ಯಾರ್ಥಿಗಳ ಚಿತ್ತ ಭಿತ್ತಿಯಲ್ಲಿ ಚಿಗುರೊಡೆಯುವ ಆಲೋಚನೆಗಳಿಗೆ ಪುಷ್ಟಿ ನೀಡಿ ಬಲಪಡಿಸುವ ಉದ್ದೇಶದಿಂದ, ಕೇವಲ ಓದಿಗಷ್ಟೆ ಸೀಮಿತವಾಗಿರದೆ ಸ್ಪರ್ಧಾತ್ಮಕತೆಗೆ ಅನುಗುಣವಾಗಿ ಇಂದಿನ ಯುವ ಪೀಳಿಗೆಗೆ ವಿಶೇಷ ತರಬೇತಿಗಳ ಅಗತ್ಯವಿರುವುದನ್ನು ಮನಗೊಂಡು ಭವಿಷ್ಯದಲ್ಲಿ ವಿವಿಧ ಉದ್ಯೋಗಗಳನ್ನು ಪಡೆಯಲು ಬೇಕಾಗಿರುವ ಸಂದರ್ಶನಗಳನ್ನು ಎದುರಿಸುವಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಆಂಗ್ಲ ಭಾಷಾ ಕೌಶಲ್ಯವನ್ನು ಹೆಚ್ಚಿಸುವ ಸಲುವಾಗಿ ವಿವಿಧ ಚಟುವಟಿಕೆ ಆಧಾರಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳ ವೈಕ್ತಿತ್ವ ಬೆಳವಣಿಗೆಗಾಗಿ ವೈಕ್ತಿತ್ವ ವಿಕಸನದಂತಹ ತರಬೇತಿ ಹಾಗೂ ವಿದ್ಯಾರ್ಥಿಗಳ ಮನೋವಿಕಾಸಕ್ಕಾಗಿ ವಿದ್ಯಾರ್ಥಿ ಕೌನ್ಸಲಿಂಗ್ ನಡೆಸಲಾಗುತ್ತಿದೆ.ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ವರ್ಷದುದ್ದಕ್ಕೂ ಆಯೋಜನೆ ಮಾಡುವುದರ ಮೂಲಕ ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿಯೂ ವಿದ್ಯಾರ್ಥಿ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲಾಗುತ್ತಿದೆ.ಇದಕ್ಕೆ ಸಾಕ್ಷಿವೆಂಬಂತೆ ಕಳೆದ 2 ಶೈಕ್ಷಣಿಕ ವರ್ಷಗಳಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ,ಸಾಹಿತ್ಯಕ ಕ್ಷೇತ್ರಗಳಲ್ಲಿ ರಾಜ್ಯ,ರಾಷ್ಟ್ರ ಮಟ್ಟದಲ್ಲಿ ಹತ್ತಾರು ಪ್ರಶಸ್ತಿಗಳನ್ನು ಪಡೆಯುವುದರ ಮೂಲಕ ರಾಜ್ಯ,ರಾಷ್ಟ್ರೀಯ ಮಟ್ಟದಲ್ಲಿ ಕಾಲೇಜು ಗುರುತಿಸಿಕೊಂಡಿದೆ.

ಜನತಾ ಶಿಕ್ಷಣ ಸಂಸ್ಥೆಯ ವಿಶೇಷ ಸೌಲಭ್ಯಗಳು

ಶಿಕ್ಷಣ ಕ್ಷೇತ್ರದಲ್ಲಿ ಹಲವು ವರ್ಷಗಳ ಅನುಭವವಿರುವ‌ ಉತ್ತಮ ಉಪನ್ಯಾಸಕ ವೃಂದ

ಸ್ಪರ್ಧಾತ್ಮಕ ಪರೀಕ್ಷೆ ಗಳಾದ CET/ NEET/JEE-M/IIT/KVPY/NATA/NDA/CA,CS ತರಗತಿಗಳು CMAಹಾಗೂ Banking Foundation Courceಗಳಿಗೆ ಅನುಭವಶಾಲಿ ಉಪನ್ಯಾಸಕರಿಂದ ಉತ್ತಮ ರೀತಿಯ ತರಬೇತಿ

ವಿಜ್ಞಾನ ವಿಭಾಗವನ್ನು ಆರಿಸಿಕೊಂಡು ಸಂಶೋಧನಾ ಕ್ಷೇತ್ರಕ್ಕೆ ಹೋಗ ಬಯಸುವ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ನೀಡಿ ಪ್ರೋತ್ಸಾಹಿಸುವ ಉದ್ದೇಶದಿಂದ Indian Institute of Science ಹಮ್ಮಿಕೊಂಡಿರುವ KVPY(Kishor Vaigyanic Protsahan Yojana) Fellowship Award 2024-25ನೇ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿ ಉತ್ತಮ ಫಲಿತಾಂಶವನ್ನು ಪಡೆಯುವ ಯೋಜನೆಯನ್ನು ಹಮ್ಮಿಕೊಂಡಿದ್ದೇವೆ.

ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ತರಗತಿ ಕಲಿಕೆಯ ಜೊತೆಗೆ ಪ್ರಾಯೋಗಿಕ ಜ್ಞಾನಕ್ಕಾಗಿ Business Day, industrial Visit ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ

ಕ್ರೀಡಾ ಹಾಗೂ ಸಾಂಸ್ಕ್ರತಿಕ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಷ್ಟ್ರಮಟ್ಟವನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಉತ್ತೇಜನಕ್ಕಾಗಿ ನಮ್ಮ ಕಾಲೇಜಿನಲ್ಲಿ ಉಚಿತ ಪ್ರವೇಶವನ್ನು ನೀಡಿ ಪ್ರತಿಭೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ.

ಕಲಿಕೆಯಲ್ಲಿ ಹಿಂದುಳಿದ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗಾಗಿ ಸಂಜೆ (5-7)ಗಂಟೆಯವರೆಗೆ ಉಚಿತ ವಿಶೇಷ ತರಗತಿಗಳು

ಮಧ್ಯಾಹ್ನದ ಭೋಜನದ ವ್ಯವಸ್ಥೆ

ದೂರದ ಊರುಗಳಿಂದ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗಾಗಿ ಸುರಕ್ಷಿತ ಬಸ್ ವ್ಯವಸ್ಥೆ

( ಶಿರೂರು,ಬೈಂದೂರು, ಕೊಲ್ಲೂರು,ಮುದೂರು, ಕಮಲಶಿಲೆ,ಆಜ್ರಿ,ನೇರಳಕಟ್ಟೆ,ಮಾವಿನಕಟ್ಟೆ,ಕರ್ಕಿ,ಹಟ್ಟಿಯಂಗಡಿ,ಆಲೂರು, ಹೊಸಂಗಡಿ,ಸಿದ್ಧಾಪುರ, ಅಂಪಾರು,ಬಸ್ರೂರು,ಬ್ರಹ್ಮಾವರ,ಹಾಗೂ ಕುಂದಾಪುರ ಶಾಸ್ತ್ರೀ ವ್ರತ್ತದಿಂದ- ಕಾಲೇಜಿನ ಕ್ಯಾಂಪಸ್)

ಈ ಮಾರ್ಗಗಳ ಮೂಲಕ ಕಾಲೇಜಿನ ಕ್ಯಾಂಪಸ್ ವರೆಗೆ ಬಸ್ ವ್ಯವಸ್ಥೆಯನ್ನು ಮಾಡಿರುತ್ತೇವೆ.

ಕಾಲೇಜು ವಿಭಾಗದ ವಿವಿಧ ಕ್ರೀಡೆಗಳಿಗೆ ಉತ್ತಮ ರೀತಿಯ ತರಬೇತಿ ನೀಡಿ ಸ್ಪರ್ಧಾತ್ಮಕವಾಗಿ ವಿದ್ಯಾರ್ಥಿಗಳನ್ನು ತಯಾರಿ ಮಾಡಲು‌ ಕ್ರೀಡಾ ಕ್ಷೇತ್ರದಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ದೈಹಿಕ ಶಿಕ್ಷಣ ಉಪನ್ಯಾಸಕರ ತಂಡದಿಂದ ಸೂಕ್ತ ತರಬೇತಿ ನೀಡಿ ಕ್ರೀಡಾ ರಂಗದಲ್ಲಿಯು ವಿಶೇಷವಾಗಿ ವಿದ್ಯಾರ್ಥಿ ಪ್ರತಿಭೆಗಳನ್ನು ಗುರುತಿಸಿಕೊಳ್ಳುವ ಕಾರ್ಯ ನಡೆಸಲಾಗುತ್ತಿದೆ.

ಸಾಂಸ್ಕೃತಿಕ,ಸಾಹಿತ್ಯ ಕ್ಷೇತ್ರಕ್ಕೆ ವಿಶೇಷ ಉತ್ತೇಜನ ನೀಡಲು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸೂಕ್ತ ತರಬೇತಿಯನ್ನು ನೀಡುತ್ತಾ ಆ ಮೂಲಕ ಜಿಲ್ಲಾ,ರಾಜ್ಯ,ರಾಷ್ಟ್ರ ಮಟ್ಟದ ಬ್ರಹತ್ ವೇದಿಕೆಗಳಿಗೆ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ.

ಸುಸಜ್ಜಿತವಾದ ಗ್ರಂಥಾಲಯ ವ್ಯವಸ್ಥೆ.

ವಿದ್ಯಾರ್ಥಿಗಳ ದೈಹಿಕ ಕ್ರೀಡೆಗಳಿಗೆ ವಿಶೇಷ ಅವಕಾಶಗಳನ್ನು ಒದಗಿಸಲು ವಿಶಾಲವಾದ ಆಟದ ಮೈದಾನ

ವಿಜ್ಞಾನ ಕಲಿಕೆಗೆ ಪೂರಕವಾದ ಸುಸಜ್ಜಿತವಾದ ಹಾಗೂ ಆಕರ್ಷಕವಾದ ವಿಜ್ಞಾನ ಪ್ರಯೋಗಾಲಯಗಳು

ವಿಶಾಲವಾದ ಹಾಗೂ ಅತ್ಯಾಧುನಿಕವಾದ ಗಣಕಯಂತ್ರ ಕೊಠಡಿ (Computer lab)

ಬಾಲಕ, ಬಾಲಕಿಯರಿಗಾಗಿ ಪ್ರತ್ಯೇಕವಾದ, ಸುಸಜ್ಜಿತವಾದ ಹವಾ ನಿಯಂತ್ರಿತ ಹಾಸ್ಟೆಲ್ ವ್ಯವಸ್ಥೆ

ವಿದ್ಯಾರ್ಥಿಗಳಿಗೆ ಕಲಿಕೆಗೆ ಅನುಕೂಲ ವಾಗುವಂತೆ ಬಾಲಕ ಬಾಲಕಿಯರಿಗೆ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯ ಕಲ್ಪಿಸಲಾಗಿದೆ. ಮುಂಜಾನೆ 5ಗಂಟೆಗೆ ಯೋಗ, ಧ್ಯಾನ ಹಾಗೂ ರಾತ್ರಿ 10.30ತನಕ ಶಿಸ್ತುಬದ್ದವಾಗಿ ಓದುವ ವಾತಾವರಣ ಕಲ್ಪಿಸಲಾಗಿದೆ.ಪ್ರತಿ ದಿನ ಬಗೆ ಬಗೆಯ ಉಪಹಾರ, ಮಧ್ಯಾಹ್ನ ದ ಊಟ, ಸಂಜೆ ಲಘು ಉಪಹಾರ, ಹಾಗೂ ರಾತ್ರಿಯ ಊಟವನ್ನು ಶುಚಿ ರುಚಿ ಯಾಗಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.

ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗಾಗಿ ಸಮರ್ಪಣಾ ಎಜುಕೇಶನ್ ಟ್ರಸ್ಟ್ ನ ಮೂಲಕ ವಿದ್ಯಾರ್ಥಿ ಪ್ರೋತ್ಸಾಹ ಧನ ನೀಡಲಾಗುವುದು.

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ (ಸರ್ಕಾರಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಮೂಲಕ) ವಿದ್ಯಾರ್ಥಿ ವೇತನ

ಕಾಲೇಜು ಆವರಣದಲ್ಲಿಯೇ ಸುಸಜ್ಜಿತವಾದ ಕ್ಯಾಂಟಿನ್ ವ್ಯವಸ್ಥೆ 

ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ.

ಒಟ್ಟಾರೆಯಾಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಪೂರಕ ವಾತಾವರಣ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳ ಜ್ಞಾನಕೌಶಲ್ಯವನ್ನು ಗಟ್ಟಿಗೊಳಿಸಲು ಗುಣಮಟ್ಟದ ಹಾಗೂ ಮೌಲ್ಯಯುತ ಶಿಕ್ಷಣವನ್ನು ನೀಡುವ ಹೊಂಗನಸು ನನಸಾಗುವ ಸಂಸ್ಥೆಯ ಆಡಳಿತ ಮಂಡಳಿಯವರ ಕನಸಿನೊಂದಿಗೆ, ಶೈಕ್ಷಣಿಕ ಮಾರ್ಗದರ್ಶಕರಾದ ಶ್ರೀಮತಿ ಚಿತ್ರಾ ಕಾರಂತರವರ ಸೂಕ್ತ ಮಾರ್ಗದರ್ಶನದಲ್ಲಿ,ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರ ಉತ್ತಮ ನಾಯಕತ್ವ ಗುಣ, ಕಾಲೇಜು ಉಪನ್ಯಾಸಕರ ಕಠಿಣ ಪರಿಶ್ರಮದಿಂದ ಕಾಲೇಜು ಉತ್ತಮ ಮಟ್ಟದಲ್ಲಿ ಮುನ್ನಡೆಯಲು ಯೋಜನೆಯನ್ನು ರೂಪಿಸಿದೆ.

ಗಣೇಶ ಮೊಗವೀರರವರ ಆಡಳಿತದಲ್ಲಿ ಕಿರಿಮಂಜೇಶ್ವರದ ಶುಭದಾ ಆಂಗ್ಲ ಮಾಧ್ಯಮ ಶಾಲೆ(ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್).

ಪದವಿಪೂರ್ವ ಶಿಕ್ಷಣದ ಕನಸು ನನಸಾಗುತ್ತಿದ್ದಂತೆ ತನ್ನದೇ ಆದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯನ್ನು ಆರಂಭಿಸುವ ಇವರ ಕನಸು ಸಾಕಾರಗೊಂಡಿತು.2024-25ನೇ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕಿರಿಮಂಜೇಶ್ವರದ ಶುಭದಾ ಆಂಗ್ಲ ಮಾಧ್ಯಮ ಶಾಲೆಯ ಆಡಳಿತದ ಚುಕ್ಕಾಣಿ ಹಿಡಿದ ಶ್ರೀ ಗಣೇಶ ಮೊಗವೀರರವರು ವಿಶೇಷ ವಿನೂತನ ಚಟುವಟಿಕೆಗಳೊಂದಿಗೆ ಶಾಲೆಯನ್ನು ಮುನ್ನಡೆಸುವ ಯೋಜನೆ ರೂಪಿಸಿಕೊಂಡಿದ್ದಾರೆ.

⭕ಗಣೇಶ್ ಮೊಗವೀರರ ಶೈಕ್ಷಣಿಕ ಸಾಧನೆಗೆ ಒಲಿದುಬಂದ ಪ್ರಶಸ್ತಿ ಗಳು

*ಸನಾತನ ಫೌಂಡೇಶನ್ ಬೆಂಗಳೂರು ಸಾರಥ್ಯದಲ್ಲಿ ಉಡುಪಿ ಮಠದ ಸ್ವಾಮೀಜಿ ಪುತ್ತಿಗೆ ಶ್ರೀ ಶ್ರೀ ಶ್ರೀ ಸುಗುಣೇಂದ್ರತೀರ್ಥರು ಹಾಗೂ ಅವರ ಪ್ರಿಯ ಶಿಷ್ಯರಾದ ಶ್ರೀ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಸ್ವಾಮೀಜಿಯವರಿಂದ ಕೊಡಮಾಡುವ ಅತ್ಯುನ್ನತ ಪ್ರಶಸ್ತಿ *ವಿಕ್ರಮ* ಪ್ರಶಸ್ತಿ

ಗೋವಾದಲ್ಲಿ ನಡೆದ ಪ್ರತಿಷ್ಠಿತ ಟೊಪ್ನೆಟೆಕ್ ಪೌಂಡೇಶನ್ ನವರು ಕೊಡಮಾಡಿರುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್ 2025-”

ಏಷ್ಯನೆಟ್ ಸುವರ್ಣ ಹಾಗೂ ಕನ್ನಡ ಪ್ರಭ ಪತ್ರಿಕೆಯವರು ಕೊಡಮಾಡುವ ಅಂತರಾಷ್ಟ್ರೀಯ ಮಟ್ಟದವಿಯೆಟ್ನಾಂ ಇಂಡಿಯಾ ಅಂತರಾಷ್ಟ್ರೀಯ ಐಕಾನಿಕ್ ಪ್ರಶಸ್ತಿ

ಶ್ರೀ ರಾಘವೇಂದ್ರ ಸ್ವಾಮೀಜಿಗಳ ಮಠ ಶ್ರೀ ಕ್ಷೇತ್ರ ಮಂತ್ರಾಲಯ ದಿವ್ಯ ಸಾನಿಧ್ಯದಲ್ಲಿ ಕೊಡ ಮಾಡಿದ ಪ್ರತಿಷ್ಠಿತ ಪರಿಮಳ ಪ್ರಶಸ್ತಿ-2025

ವಿವಿಧ ಶೈಕ್ಷಣಿಕ ಪರೀಕ್ಷೆ ಗಳಲ್ಲಿ ವಿದ್ಯಾರ್ಥಿಗಳ ಸಾಧನೆ

⭕ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಸತತ 3 ನೇ ವರ್ಷವೂ ಕಾಲೇಜಿಗೆ ದಾಖಲೆಯ 100 ಫಲಿತಾಂಶ

ರಾಜ್ಯ ಮಟ್ಟದ 7 ರ‍್ಯಾಂಕ್ 2024 -25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರ ಭಾಗದ ಪ್ತತಿಷ್ಟಿತ ಶಿಕ್ಷಣ ಸಂಸ್ಥೆ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು ಸತತ ಮೂರನೇ ವರ್ಷವೂ ಶೇಕಡಾ ನೂರು ಫಲಿತಾಂಶದೊ0ದಿಗೆ ಸಾರ್ವತ್ರಿಕ ದಾಖಲೆ ಸೃಷ್ಟಿಸಿದೆ .

ವಿಜ್ಞಾನ ವಿಭಾಗದಲ್ಲಿ 204 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 113 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 113 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ .ವಾಣಿಜ್ಯ ವಿಭಾಗದಲ್ಲಿ 88 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 36 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 52 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಸಾಧನೆ ಮಾಡಿದ್ದಾರೆ .

⭕KCET-2025 ಫಲಿತಾಂಶ

K-CET 2025 ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿ ಆಕಾಶ್ ಹೆಬ್ಬಾರ್ ವೆಟರ್ನರಿ ಸೈನ್ಸ್‌- 999ರಾಂಕ್,ನ್ಯಾಚುರೋಪತಿ & ಸೈನ್ಸ್- 932,ನರ್ಸಿಂಗ್- 1009ಬಿ ಫಾರ್ಮ್-1382,ಬಿ.ಎಸ್ಸಿ ಅಗ್ರಿ- 1382 Rankಗಳನ್ನು ಪಡೆದು ಅದ್ವಿತೀಯ ಸಾಧನೆ ಮಾಡಿರುತ್ತಾನೆ.

ಪರೀಕ್ಷೆ ಬರೆದ 85 ವಿದ್ಯಾರ್ಥಿಗಳಲ್ಲಿ, 25 ವಿದ್ಯಾರ್ಥಿಗಳು ಹತ್ತು ಸಾವಿರದ ಒಳಗೆ Rankಗಳನ್ನು ಪಡೆದು ಸಾಧನೆ ಮೆರೆದಿರುತ್ತಾರೆ.ಕ್ರಮವಾಗಿ ನಿಶ್ಚಿತ್ ಇಂಜಿನಿಯರಿಂಗ್ -1638 ನೇ Rank, ಶೋಭಿತ್-ಬಿ.ಎಸ್ಸಿ ಅಗ್ರಿ 2006 ನೇ Rank, ಗಿರೀಶ್ ಪೈ ಇಂಜಿನಿಯರಿಂಗ್-2159 ನೇ Rank ಚಿರಂತನ್ ಇಂಜಿನಿಯರಿಂಗ್-2219 ನೇ Rank,

ಶಶಾಂಕ್ ಇಂಜಿನಿಯರಿಂಗ್-2219 ನೇ Rank ಪಡೆಯುವುದರ ಮೂಲಕ ಅದ್ವಿತೀಯ ಸಾಧನೆ ಮಾಡಿ ರಾಜ್ಯದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶಾತಿಯನ್ನು ಪಡೆಯಲು ಅರ್ಹರಾಗಿರುತ್ತಾರೆ.

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜನತಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಕಾಲೇಜು ಪ್ರಾರಂಭದ ತೃತೀಯ ವರ್ಷವೂ ರಾಜ್ಯಮಟ್ಟದಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸಿರುವುದು ಪ್ರಶoಸನಾರ್ಹ

⭕ನೀಟ್ ಫಲಿತಾಂಶ- 2025

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಅದ್ಭುತ.

ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ

ಪ್ರಕಟಗೊಂಡಿದ್ದು,ಹೆಮ್ಮಾಡಿಯ ಜನತಾ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ‌ ಸಾಧನೆಗೈದಿದ್ದಾರೆ.ವಿದ್ಯಾರ್ಥಿಗಳಾದ ಆಕಾಶ್ ಹೆಬ್ಬಾರ್ 525,ಸುಬ್ರಹ್ಮಣ್ಯ ಜಿ.515 ಅಂಕಗಳನ್ನು ಪಡೆದು ಅರ್ಹತೆ ಪಡೆದಿರುತ್ತಾರೆ.

⭕ಜೆಇಇ ಮೈನ್ಸ್ 2025 ಪ್ರವೇಶ ಪರೀಕ್ಷೆಯಲ್ಲಿ ಕಾಲೇಜಿಗೆ 99 ಪರ್ಸಂಟೈಲ್ ಗಿಂತ ಅಧಿಕ ಅಂಕಗಳು.

ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ಮೂರನೇ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ.ಗ್ರಾಮೀಣ ಭಾಗದಲ್ಲಿ ಆರಂಭಗೊಂಡು ಶೈಕ್ಷಣಿಕ ಸಂಚಲನ ಮೂಡಿಸಿರುವ ಜನತಾ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಗುಣಮಟ್ಟದ ಶಿಕ್ಷಣ ನೀಡುತ್ತಿದೆ, ಜೆಇಇ ಮೈನ್ಸ್ 2025ರ ಎರಡನೇ ಹಂತದ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಾದ ಆಕಾಶ್ ಹೆಬ್ಬಾರ್ 99.390 ಪರ್ಸಂಟೈಲ್ ಗಿರೀಶ್ ಪೈ 99.045 ಪರ್ಸಂಟೈಲ್, ನಿಶ್ಚಿತ್ 98.929 ಪರ್ಸಂಟೈಲ್, ಧೀರಜ್ ಜಿ.ಡಿ.97.787ಪರ್ಸಂಟೈಲ್,

ಚಿರಂತನ್ 95.866 ಪರ್ಸಂಟೈಲ್,ಶಶಾಂಕ್ 93.722 ಪರ್ಸಂಟೈಲ್,ಪ್ರಸಾದ್ 93.701 ಪರ್ಸಂಟೈಲ್,ಶ್ರದ್ಧಾ 93.155,ಪರ್ಸಂಟೈಲ್, ಲಿಖಿತ್ 90.789 ಪರ್ಸಂಟೈಲ್,ರಿಯಾನ್ 90.563‌ ಪರ್ಸಂಟೈಲ್,ಅನಿರುದ್ದ್ 90.329 ಪರ್ಸಂಟೈಲ್ ಪಡೆದು ಜೆಇಇ ಅಡ್ವನ್ಸ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುತ್ತಾರೆ.

⭕ಕಂಪೆನಿ ಸೆಕ್ರೇಟರಿ ಪ್ರವೇಶ ಪರೀಕ್ಷೆಯಲ್ಲಿ(CS) ಅತ್ಯುತ್ತಮ ಸಾಧನೆ ಮೆರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಧನೆ ತೋರಿದ್ದಾರೆ.

ಇನ್ಸಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರಿಸ್ ಇನ್ ಇಂಡಿಯಾದವರು ನಡೆಸಿದ ಸಿ.ಎಸ್.ಇ.ಇ.ಟಿ (ಕಂಪೆನಿ ಸಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್) ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸನ್ವಿತಾ,ವಂಶಿ,ಕೆ.ವಿ.ಶರಣ್ಯ,ಪ್ರೇಕ್ಷಾ ಪೂಜಾರಿ,ನಾಗೇಂದ್ರ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ.

⭕CA ಫೌಂಡೇಶನ್ ಪರೀಕ್ಷೆ 2025 ಗಣನೀಯ ಸಾಧನೆ ಮೆರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು.

CA ಫೌಂಡೇಶನ್ ಪರೀಕ್ಷೆ 2025ರಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಪಡೆದು ಸಾಧನೆ ಮೆರೆದಿರುತ್ತಾರೆ.

ವಿದ್ಯಾರ್ಥಿಗಳಾದ ವಿಘ್ನೇಶ್ 228 ಅಂಕಗಳು,ಕೌಶಲ್ ಆಚಾರ್ 209 ಅಂಕಗಳು,ರಿತೇಶ್ ಮೊಗವೀರ 208 ಅಂಕಗಳನ್ನು ಪಡೆಯುವುದರ ಮೂಲಕ ಮುಂದಿನ ಹಂತಕ್ಕೆ ತೇರ್ಗಡೆಯಾಗಿರುತ್ತಾರೆ.

ಹೀಗೆ ಕಾಲೇಜು ಆರಂಭ ವಾದ ಅತ್ಯಲ್ಪ ಅವಧಿಯಲ್ಲಿ ವಿಶೇಷ ಸಾಧನೆ ಮಾಡಿರುವುದು ಅಭಿನಂದನಾರ್ಹ ಸಂಗತಿ.ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಪದವಿಪೂರ್ವ ಶಿಕ್ಷಣಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಸಾಧನೆಯೊಂದಿಗೆ ಕಾಲೇಜು ವಿಶೇಷವಾಗಿ ಗುರುತಿಸಿಕೊಂಡಿದೆ.(ಕೋಟ್ ಲೈನ್)

ಕೃಷಿ ಕೂಲಿ ಕಾರ್ಮಿಕ ವರ್ಗದ ಬಡ ಕುಟುಂಬದ ಮಕ್ಕಳು, ಆರ್ಥಿಕವಾಗಿ ಅಶಕ್ತವಾಗಿರುವ ಸಾಮಾನ್ಯ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಬೇಕು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸಿ ಉತ್ತಮ ರೀತಿಯಲ್ಲಿ ಜೀವನ ಕಟ್ಟಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಶಿಕ್ಷಣ ಸಂಸ್ಥೆ ಆರಂಭಿಸಲಾಗಿದೆ.ನಮ್ಮ ಉದ್ದೇಶ ಈಡೇರಿದೆ ಎನ್ನುವ ಖುಷಿ ಇದೆ. ಗ್ರಾಮೀಣ

ಪ್ರದೇಶದ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ಜನತಾ ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ.

-ಗಣೇಶ್ ಮೊಗವೀರ ಅಧ್ಯಕ್ಷರು, ಪ್ರಾಂಶುಪಾಲರು ಜನತಾ ಪಪೂ ಕಾಲೇಜು, ಹೆಮ್ಮಾಡಿ

Related Articles

Back to top button