ಸರಕಾರಿ ಪ್ರೌಢಶಾಲೆ ವಕ್ವಾಡಿ: ತಾಲೂಕು ಮಟ್ಟದ ಕ್ರೀಡಾಕೂಟದ ಪೂರ್ವಭಾವಿ ಸಭೆ

Views: 330
ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ವಕ್ವಾಡಿ ಪ್ರೌಢಶಾಲೆಯಲ್ಲಿ ನಡೆಯಲಿರುವ ತಾಲೂಕು ಮಟ್ಟದ 14 ಹಾಗೂ 17 ರ ವಯೋಮಿತಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ- ಬಾಲಕಿಯರ ಕ್ರೀಡಾಕೂಟ- 2025- 26 ಇದರ ಪೂರ್ವಭಾವಿ ಸಭೆ ಸೆಪ್ಟಂಬರ್ 14 ರಂದು ರವಿವಾರ ಪ್ರೌಢಶಾಲೆಯಲ್ಲಿ ನಡೆಯಿತು.
ಕುಂದಾಪುರ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕ್ರೀಡಾಕೂಟ ನಿರ್ವಹಣೆಗೆ ತಮಗೆ ಕೊಟ್ಟ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದರೆ ಯಶಸ್ವಿಯಾಗುತ್ತದೆ. ಈ ಉತ್ಸವದಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿದಾಗ ಊರಿನ ಹಬ್ಬವಾಗುತ್ತದೆ. ಪ್ರೌಢಶಾಲೆಗಳಿಗೆ ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗುತ್ತಿರುವುದರ ಬಗ್ಗೆ ಸಮಗ್ರ ಚಿಂತನೆಯಾಗಬೇಕು. ಊರಿನ ಸಹಕಾರದೊಂದಿಗೆ ಗುಣಮಟ್ಟದ ಶಿಕ್ಷಣ ಇನ್ನೂ ಹೆಚ್ಚಿನ ರೀತಿಯಲ್ಲಿ ದೊರೆಯುವಂತಾದರೆ ಶಾಲೆಯ ಅಭಿವೃದ್ಧಿ ಖಂಡಿತ ಸಾಧ್ಯ ಎಂದರು.
ಕ್ರೀಡಾಕೂಟದ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಸಣಗಲ್ ಮನೆ, ಎಸ್ ಡಿಎಂಸಿ ಅಧ್ಯಕ್ಷ ರಾಜೀವ ಕುಲಾಲ, ಪಂಚಾಯತ್ ಸದಸ್ಯರಾದ ರವಿರಾಜ್ ಶೆಟ್ಟಿ, ರಮೇಶ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯಿನಿ ಸುಜಾತ ಬಿ, ಯುವಜನ ಸೇವಾ ಕ್ರೀಡಾಧಿಕಾರಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಕುಸುಮಾಕರ ಶೆಟ್ಟಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕ್ರೀಡಾಕೂಟದ ಯಶಸ್ವಿಗೆ ವಿವಿಧ ಸಮಿತಿಗೆ ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಜವಾಬ್ದಾರಿಗಳನ್ನು ಹಂಚಲಾಯಿತು.ಕ್ರೀಡಾಕೂಟದ ಯಶಸ್ವಿಗೆ ಊರಿನವರು ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಶಾಲಾ ಮುಖ್ಯೋಪಾಧ್ಯಾಯಿನಿ ಸುಜಾತ ಬಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಕುಸುಮಕರ ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿ, ಈ ಕ್ರೀಡಾಕೂಟದ ಸಮಗ್ರ ಚಿತ್ರಣ ವಿವರಿಸಿ ಸಂಪೂರ್ಣ ಯಶಸ್ವಿಗಾಗಿ ವಿನಂತಿಸಿದರು.
ಶಿಕ್ಷಕ ಸದಾನಂದ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಶೆಟ್ಟಿ ವಕ್ವಾಡಿ ವಂದಿಸಿದರು.