ಸರಕಾರಿ ಹಿ.ಪ್ರಾ ಶಾಲೆ ವಕ್ವಾಡಿ, ಶತಮಾನೋತ್ಸವ ಕಾರ್ಯಕ್ರಮ

Views: 343
ಕುಂದಾಪುರ: ಸರಕಾರಿ ಹಿ.ಪ್ರಾ.ಶಾಲೆ ವಕ್ವಾಡಿ ಶತಮಾನೋತ್ಸವ ಸಮಿತಿ ಮತ್ತು ಹಳೆ ವಿದ್ಯಾರ್ಥಿ ಸಂಘ ಇವರ ಸಹಯೋಗದಲ್ಲಿ ಶತಮಾನೋತ್ಸವ ಶತಾಬ್ದಿ -2023 ಕಾರ್ಯಕ್ರಮದಲ್ಲಿ ಬೆಳಿಗ್ಗೆ ಧ್ವಜಾರೋಹಣ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ರವಿವಾರ ಬೆಳಿಗ್ಗೆ ನಡೆಯಿತು.

ಕಾಳಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪಾರ್ವತಿ ಶೇರಿಗಾರ್ ಅಧ್ಯಕ್ಷತೆ ವಹಿಸಿದ್ದರು.
ಮೊಳಹಳ್ಳಿ ಪ್ರಖ್ಯಾತ್ ಸಿವಿಲ್ ಇಂಜಿನಿಯರ್ ಮತ್ತು ಶಾಲೆಯ ಹಿರಿಯ ಹಳೆ ವಿದ್ಯಾರ್ಥಿ ಮೊಳಹಳ್ಳಿ ಸುಬ್ಬಣ್ಣ ಶೆಟ್ಟಿ ಧ್ವಜಾರೋಹಣ ಗೈದರು. ನಂತರ ಅವರು ಮಾತನಾಡಿ, 88 ವರ್ಷಗಳ ಹಿಂದೆ ಈ ಶಾಲೆಯಲ್ಲಿ ನಾನು ಹಳೆ ವಿದ್ಯಾರ್ಥಿಯಾಗಿದ್ದು, ಈ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ದೇಶ ಸೇವೆಯಲ್ಲಿ ತೊಡಗಿಸಿಕೊಂಡು ಜೀವನ ಸಾರ್ಥಕ ಪಡಿಸಿಕೊಳ್ಳಿ ಎಂದರು.

ಮುಖ್ಯ ಅತಿಥಿಗಳಾಗಿ ಉದ್ಯಮಿ ಕಾಸರಗೋಡು ಮನೆ ವಿಶ್ವನಾಥ್ ಶೆಟ್ಟಿ, ಶ್ರೀ ಮಹಾಲಿಂಗೇಶ್ವರ ದೇವಳದ ಪರ್ಯಾಯ ಅರ್ಚಕ ಶ್ರೀ ಕೃಷ್ಣ ಐತಾಳ್, ನಿವೃತ್ತ ಪದವೀಧರ ಮುಖ್ಯ ಶಿಕ್ಷಕ ರತ್ನಾಕರ ಶೆಟ್ಟಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ನರಸಿಂಹ ಪೂಜಾರಿ,ಕೋಟೇಶ್ವರ ಸಂಪನ್ಮೂಲ ವ್ಯಕ್ತಿ ಪ್ರಕಾಶ್ ಜೋಗಿ, ಕುಂದಾಪುರ ಕ್ಷೇತ್ರ ಸಂಪನ್ಮೂಲ ಕೇಂದ್ರದ ಅಧಿಕಾರಿ ಶಂಕರ್ ಕುಲಾಲ್, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ವಕ್ವಾಡಿ ಚಂದ್ರಶೇಖರ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತ್ಯರಂಜನ್ ಹೆಗ್ಡೆ, ಎಸ್ ಡಿಎಂಸಿ ಅಧ್ಯಕ್ಷ ಅನಂತ ಪದ್ಮನಾಭ ಶೆಟ್ಟಿಗಾರ್, ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಭಾರತಿ, ನಿವೃತ್ತ ಮುಖ್ಯ ಶಿಕ್ಷಕ ಕರುಣಾಕರ ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕ ಸಂತೋಷ್ ಕುಮಾರ್ ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕ ದಿನಕರ ಶೆಟ್ಟಿ, ಸಮಿತಿಯ ಉಪಾಧ್ಯಕ್ಷ ಪುಟ್ಟರಾಜ ಹೆಬ್ಬಾರ್, ನಿವೃತ್ತ ಮುಖ್ಯ ಶಿಕ್ಷಕ ಭಾಸ್ಕರ್ ಶೆಟ್ಟಿ ಸಭೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲೆಯ ಹಳೆ ವಿದ್ಯಾರ್ಥಿ ಮೊಳಹಳ್ಳಿ ಸುಬ್ಬಣ್ಣ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಮತ್ತು ಇನ್ನಿತರ ಸಾಧಕರನ್ನು ಗೌರವಿಸಲಾಯಿತು. ಕ್ರೀಡೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಶಿಕ್ಷಕ ಸದಾನಂದ ಶೆಟ್ಟಿ, ಸುಲೇಖ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಕ ಬಾಲಕೃಷ್ಣ ಶೆಟ್ಟಿ ಮತ್ತು ಶಾಲಾ ಮುಖ್ಯ ಶಿಕ್ಷಕ ಗಣೇಶ್ ಶೆಟ್ಟಿ ಸ್ವಾಗತಿಸಿದರು.ದಿವ್ಯಾ ಲಕ್ಷ್ಮಿ ವಂದಿಸಿದರು.






