ಶಿಕ್ಷಣ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ: ಪದವಿ ನಂತರದ ಸಂಶೋಧನಾ ಅವಕಾಶಗಳ ಬಗ್ಗೆ ವಿಶೇಷ ಉಪನ್ಯಾಸ

ವಿದ್ಯಾರ್ಥಿಗಳು ಪಠ್ಯಕ್ರಮದ ಚೌಕಟ್ಟಿಗೆ ಸೀಮಿತರಾಗದೆ, ಮೂಲ ವಿಜ್ಞಾನದಲ್ಲಿ ಲಭ್ಯವಿರುವ ವಿವಿಧ ಸಂಶೋಧನಾ ಅವಕಾಶಗಳಿಗೆ ಸಿದ್ಧರಾಗುತ್ತ, ಶೀಘ್ರವಾಗಿ ಬದಲಾಗುತ್ತಿರುವ ವಿಜ್ಞಾನ ಲೋಕಕ್ಕೆ ತಮ್ಮನ್ನು ತಾವು ತೆರೆದುಕೊಳ್ಳುವತ್ತ ಯೋಚಿಸಬೇಕು. – ಡಾ. ಕೃಷ್ಣ

Views: 54

ಕನ್ನಡ ಕರಾವಳಿ ಸುದ್ದಿ:ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕೋಟೇಶ್ವರ ಇಲ್ಲಿನ ವಿಜ್ಞಾನ ಸಂಘದ ವತಿಯಿಂದ ಬಿ.ಎಸ್ಸಿ. ವಿದ್ಯಾರ್ಥಿಗಳಿಗೆ ಪದವಿ ನಂತರದ ಸಂಶೋಧನಾ ಅವಕಾಶಗಳ ಬಗ್ಗೆ ವಿಶೇಷ ಉಪನ್ಯಾಸ ಏರ್ಪಡಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ, ಪ್ರಸ್ತುತ ಚೈನೀಸ್ ಅಕಾಡೆಮಿ ಆಫ್ ಸೈನ್ಸಸ್ ಬೀಜಿಂಗ್ ಇಲ್ಲಿ ಪೋಸ್ಟ್ ಡಾಕ್ಟರೇಟ್ ಫೆಲೋ ಆಗಿರುವ ಡಾ. ಕೃಷ್ಣ ಯಮನಪ್ಪ ಪೂಜಾರ ಅವರು ಮೂಲ ವಿಜ್ಞಾನದಲ್ಲಿ ಉತ್ತಮ ಅವಕಾಶಗಳ ಕುರಿತು ಮಾಹಿತಿ ನೀಡಿದರು.

ವಿದ್ಯಾರ್ಥಿಗಳ ಪಠ್ಯಕ್ರಮದ ಚೌಕಟ್ಟಿಗೆ ಸೀಮಿತರಾಗದೆ ಮೂಲ ವಿಜ್ಞಾನದಲ್ಲಿ ಲಭ್ಯವಿರುವ ವಿವಿಧ ಸಂಶೋಧನಾ ಅವಕಾಶಗಳಿಗೆ ಸಿದ್ಧರಾಗುತ್ತ, ಶೀಘ್ರವಾಗಿ ಬದಲಾಗುತ್ತಿರುವ ವಿಜ್ಞಾನ ಲೋಕಕ್ಕೆ ತಮ್ಮನ್ನು ತಾವು ತೆರೆದುಕೊಳ್ಳುವತ್ತ ಯೋಚಿಸಬೇಕು ಎಂದರು. ಮುಖ್ಯವಾಗಿ ಸ್ವಅಧ್ಯಯನ ಅತ್ಯಗತ್ಯವಾಗಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ಸ್ವಅಧ್ಯಯನಕ್ಕೆ ಮೀಸಲಿಡಬೇಕು ಎಂದರು.

ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು ಹಾಗೂ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಶೇಕರ ಬಿ., ಭೌತಶಾಸ್ತ್ರ  ವಿಭಾಗದ ಮುಖ್ಯಸ್ಥರಾದ ರಂಜಿತ್ ಉಪಸ್ಥಿತರಿದ್ದರು. ವಿಜ್ಞಾನ ವಿಭಾಗದ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದರು. ಕಾರ್ಯಕ್ರಮವನ್ನು ದ್ವಿತೀಯ ಬಿ.ಎಸ್ಸಿ. ವಿದ್ಯಾರ್ಥಿನಿ ಅಕ್ಷತಾ ನಿರೂಪಿಸಿದರು. ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಅನುಷಾ ಎಲ್. ಸ್ವಾಗತಿಸಿ, ರಂಜಿತ್ ವಂದಿಸಿದರು.

Related Articles

Back to top button