ಇತರೆ

ಸರ್ಕಾರಿ ಬಸ್ಸು-ಕಾರು ನಡುವೆ ಮುಖಾಮುಖಿ ಡಿಕ್ಕಿ: ಐವರ ಸಾವು

Views: 0

ಉತ್ತರ ಕನ್ನಡ:ವೇಗವಾಗಿ ಬಂದ ಕೆಎಸ್ಆರ್ಟಿಸಿ  ಬಸ್ ಕಾರಿಗೆ ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿರುವ ದುರ್ಘಟನೆ ಶಿರಸಿ ತಾಲೂಕಿನ ಬಂಡಲ ಬಳಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡ ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ಸು ಹಾಗೂ ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ನಡುವೆ ಶಿರಸಿ ತಾಲೂಕಿನ ಬಂಡಲ್ ಬಳಿಯಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ.ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ.ಕಾರಿನಲ್ಲಿದ್ದ ವ್ಯಕ್ತಿಗಳು ಮಂಗಳೂರು ಸಮೀಪದವರು ಎನ್ನಲಾಗಿದ್ದು, ಗಂಭೀರ ಗಾಯಗೊಂಡ ವ್ಯಕ್ತಿ ತಮಿಳುನಾಡು ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಬಸ್‌ನಲ್ಲಿ 60ಕ್ಕೂ ಅಧಿಕ ಪ್ರಯಾಣಿಕರಿದ್ದು ಕೆಲವರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ, ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಶಿರಸಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!