ಇತರೆ

ಸರ್ಕಾರಿ ಬಸ್ ಕಾರಿನ ಮಧ್ಯೆ ಭೀಕರ ಅಪಘಾತ: ತಾಯಿ ಸಾವು, ಮಗ ಪ್ರಾಣಾಪಾಯದಿಂದ ಪಾರು

Views: 158

ಕನ್ನಡ ಕರಾವಳಿ ಸುದ್ದಿ: ಸರ್ಕಾರಿ ಬಸ್ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶನಿವಾರ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ನಿರ್ಮಲ ಅವಟೆ (60) ಮೃತಪಟ್ಟ ಮಹಿಳೆ. ಕಾರು ಚಲಾಯಿಸುತ್ತಿದ್ದ ಚಿಕ್ಕೋಡಿ ಹೆಸ್ಕಾಂ ಉಪವಿಭಾಗ ಸಹಾಯಕ ಅಭಿಯಂತರ ನೇಮಿನಾಥ ಅವಟೆ  ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿಕ್ಕೋಡಿ ಪಟ್ಟಣದ ಯಾದವ ನಗರದಲ್ಲಿ ವಾಸಿಸವಿದ್ದ ಇವರು ಕಾರಿನಲ್ಲಿ ಸಂಚರಿಸುವ ವೇಳೆ ಉಮರಾಣಿ ಹತ್ತಿರ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ ನೇಮಿನಾಥ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಚಿಕ್ಕೋಡಿ ಪೊಲೀಸ್ ಠಾಣೆ ಡಿವೈಎಸ್ಪಿ ಗೋಪಾಲಕೃಷ್ಣ ಗೌಡರ, ಸಿಪಿಐ ವಿಶ್ವನಾಥ್ ಚೌಗಲಾ, ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ರೂಪಾ ಗುಡೋಡ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!