ಇತರೆ

ಸರ್ಕಾರಿ ‌ಬಸ್ ಮೇಲೆ ಟಿಪ್ಪರ್ ಪಲ್ಟಿಯಾಗಿ 20 ಮಂದಿ ಪ್ರಯಾಣಿಕರು ಸಾವು

Views: 241

ಕನ್ನಡ ಕರಾವಳಿ ಸುದ್ದಿ: ಸರ್ಕಾರಿ ಬಸ್ ಮೇಲೆ ಜಲ್ಲಿ ತುಂಬಿದ್ದ ಟಿಪ್ಪರ್ ಪಲ್ಟಿಯಾದ ಪರಿಣಾಮ ಕನಿಷ್ಟ 20 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಹೈದರಾಬಾದ್-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ರಂಗಾರೆಡ್ಡಿಜಿಲ್ಲೆಯ ಚೆವೆಲ್ಲಾದ ಮಿರ್ಜಾಗುಡ ಗ್ರಾಮದ ಬಳಿ ದುರಂತ ಸಂಭವಿಸಿದೆ. ಬಸ್‌ನಲ್ಲಿ ಸುಮಾರು 70 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಟಿಪ್ಪರ್ ಪಲ್ಟಿಯಾದ ಪರಿಣಾಮ ಜಲ್ಲಿಕಲ್ಲಿನ ಕೆಳಗೆ ಪ್ರಯಾಣಿಕರು ಸಿಲುಕಿಕೊಂಡಿದ್ದರು. ಘಟನೆಯಲ್ಲಿ 20 ಮಂದಿ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಚೆವೆಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಘಟನಾ ಸ್ಥಳದಲ್ಲಿ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

Related Articles

Back to top button
error: Content is protected !!