ಸಾಂಸ್ಕೃತಿಕ
ಸಲ್ಮಾನ್ ಖಾನ್ ನಟನೆಯ ‘ಸಿಖಂದರ್’ಗೆ ನಾಯಕಿಯಾದ ರಶ್ಮಿಕಾ ಮಂದಣ್ಣ

Views: 28
ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಜೊತೆ ತೆರೆಹಂಚಿಕೊಳ್ಳುತ್ತಿದ್ದಾರೆ.
ಯಶಸ್ವಿ ವೃತ್ತಿಜೀವನ ಮುನ್ನಡೆಸುತ್ತಿರುವ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಇಂಡಿಯನ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಮುಖ್ಯಭೂಮಿಕೆಯ ಮುಂದಿನ ಬಹುನಿರೀಕ್ಷಿತ ಚಿತ್ರ ‘ಸಿಖಂದರ್’ಗೆ ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಶೀಘ್ರದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದ್ದು, 2025ರ ಈದ್ ಸಂದರ್ಭ ತೆರೆಕಾಣಲಿದೆ.
ಕನ್ನಡದ ಕಿರಿಕ್ ಪಾರ್ಟಿ ಬೆಡಗಿ ಟಾಲಿವುಡ್ನಲ್ಲಿ ನೆಲೆಯೂರಿದ್ದಾರೆ. ಹಿಂದಿ ಸಿನಿಮಾಗಳಲ್ಲೂ ಅಭಿನಯಿಸುತ್ತಿದ್ದಾರೆ. ಕೊನೆಯದಾಗಿ ತೆರೆಕಂಡಿರುವ ಬಾಲಿವುಡ್ ಚಿತ್ರ ಅನಿಮಲ್ ಸೂಪರ್ ಡೂಪರ್ ಹಿಟ್ ಆಗಿ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸಿತ್ತು. ಇದೀಗ ಚಿತ್ರರಂಗದಲ್ಲಿ ಅತ್ಯಂತ ಬೇಡಿಕೆ ಹೊಂದಿರುವ ನಟ ಸಲ್ಮಾನ್ ಖಾನ್ ಜೊತೆ ಅಭಿನಯಿಸಲು ಸಜ್ಜಾಗಿದ್ದಾರೆ.






