ಜನಮನ
ಸಾರ್ವಜನಿಕ ಸ್ಥಳಗಳಲ್ಲಿ ಅನಾಥವಾಗಿ ಬಿದ್ದಿರುವ ವಸ್ತುಗಳನ್ನು ಮುಟ್ಟಬೇಡಿ: ಪೊಲೀಸ್ ಪ್ರಕಟಣೆ
Views: 0
ಕನ್ನಡ ಕರಾವಳಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಅನಾಥವಾಗಿ ಬಿದ್ದಿರುವ ವಸ್ತುಗಳು ಕಂಡು ಬಂದರೆ ಅದನ್ನು ಮುಟ್ಟಲು ಮುಂದಾಗದೇ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಪ್ರಕಟಣೆ ಹೊರಡಿಸಲಾಗಿದೆ.
ಮುಖ್ಯವಾಗಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೆ ವಾರಸುದಾರರು ಇಲ್ಲದೇ ಅನಾಥವಾಗಿ ಬಿದ್ದಿರುವ ವಸ್ತುಗಳು, ಅನುಮಾನಾಸ್ಪದ ವಸ್ತುಗಳು ಗಮನಕ್ಕೆ ಬಂದರೆ ಅದನ್ನು ಮುಟ್ಟುವ ಅಥವಾ ಸ್ಥಳಾಂತರಿಸುವ ಪ್ರಯತ್ನ ಮಾಡದೇ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು, ತಕ್ಷಣ 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಉತ್ತರಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಪ್ರಕಟಣೆ ಹೊರಡಿಸಲಾಗಿದೆ.






