ಇತರೆ
ಸಾಲಿಗ್ರಾಮದ ಶ್ರೀ ಗುರು ನರಸಿಂಹ ದೇವಸ್ಥಾನದ ವ್ಯವಸ್ಥಾಪಕ ಎಚ್. ನಾಗರಾಜ ಹಂದೆ ನಿಧನ
Views: 86
ಕನ್ನಡ ಕರಾವಳಿ ಸುದ್ದಿ: ಸಾಲಿಗ್ರಾಮದ ಶ್ರೀ ಗುರು ನರಸಿಂಹ ದೇವಸ್ಥಾನದ ವ್ಯವಸ್ಥಾಪಕ ಎಚ್. ನಾಗರಾಜ ಹಂದೆ ಅವರು ಮಂಗಳವಾರ ಜುಲೈ 14 ಮಧ್ಯಾಹ್ನ ನಿಧನರಾದರು. ಅವರು ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ತುಂಬು ಕುಟುಂಬ ವರ್ಗ ದವರನ್ನು ಆಗಲಿದ್ದಾರೆ.
ಕೋಟತಟ್ಟು–ಪಡುಕರೆ ನಿವಾಸಿಯಾಗಿದ್ದ ನಾಗರಾಜ ಹಂದೆ ಅವರು ಕೋಟ ಸಿಎ ಬ್ಯಾಂಕ್‌ನಲ್ಲಿ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ, ನಂತರ ಬ್ಯಾಂಕಿನ ಸಹಾಯಕ ಮಹಾಪ್ರಬಂಧಕರಾಗಿ (AGM) ಪದೋನ್ನತಿ ಹೊಂದಿ ನಿವೃತ್ತರಾಗಿದ್ದರು.
ನಿವೃತ್ತಿಯ ನಂತರವೂ ವಿವಿಧ ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಅವರು, ಪ್ರಸ್ತುತ ಕೋಟ ಸಹಕಾರಿ ವ್ಯವಸಾಯ ಸಂಘದ ಉಪಾಧ್ಯಕ್ಷರಾಗಿ ಹಾಗೂ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.






