ಸಾಲಿಗ್ರಾಮ ಡಿವೈನ್ ಪಾರ್ಕ್ ಸಂಸ್ಥಾಪಕ ಚಂದ್ರಶೇಖರ ಉಡುಪ ನಿಧನ
Views: 148
ಕನ್ನಡ ಕರಾವಳಿ ಸುದ್ದಿ: ಸಾಲಿಗ್ರಾಮ ಡಿವೈನ್ ಪಾರ್ಕ್ ಸಂಸ್ಥಾಪಕ ಎ.ಚಂದ್ರಶೇಖರ್ ಉಡುಪ (75) ಹೃದಯಾಘಾತದಿಂದ ಬುಧವಾರ ನಿಧನರಾದರು.
ಅವರು ಡಿವೈನ್ ಪಾರ್ಕ್ ಮೂಲಕ ಹಲವು ಸೇವಾ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿದ್ದರು.
ಎಪ್ಪತ್ತರ ದಶಕದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವಾಗ ವಿವೇಕಾನಂದರ ಚಿಂತನೆಗಳ ಪ್ರಭಾವಕ್ಕೆ ಒಳಗಾಗಿ ಅನಂತರ ಡಿವೈನ್ ಪಾರ್ಕ್ ಎಂಬ ಸಂಸ್ಥೆಯನ್ನು ಆರೋಗ್ಯ ಮತ್ತು ಅಧ್ಯಾತ್ಮದ ಚಿಂತನೆಯಲ್ಲಿ ಅವರು ಪ್ರಾರಂಭಿಸಿದರು.
ಡಿವೈನ್ ಪಾರ್ಕ್‌ನ ಸಹಸಂಸ್ಥೆಯಾಗಿ ಎಸ್‌ಎಚ್‌ಆರ್‌ಎಫ್ (ಯೋಗಬನ) ಸ್ಥಾಪಿಸಿದ ಅವರು, ಯೋಗ, ಪ್ರಕೃತಿ, ಆಯುರ್ವೇದಗಳ ಜತೆಗೆ ಆಧ್ಯಾತ್ಮಿಕ ಚಿಕಿತ್ಸಕ ಕ್ರಮವನ್ನೂ ಮುನ್ನೆಲೆಗೆ ತಂದಿದ್ದರು.
ಮೃತರು ಪುತ್ರ ಡಾ. ವಿವೇಕ ಉಡುಪ, ಸೊಸೆ, ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಇಂದು ಬೆಳಗ್ಗೆ 10.30ರಿಂದ ಸಂಜೆ 4 ಗಂಟೆಯವರೆಗೆ ಡಿವೈನ್ ಪಾರ್ಕ್‌ನ ಜ್ಞಾನ ಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬಳಿಕ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ ಎಂದು ಡಿವೈನ್ ಪಾರ್ಕ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಮಾಜಕ್ಕೆ ಆರೋಗ್ಯ, ಮೌಲ್ಯ ಮತ್ತು ಅಧ್ಯಾತ್ಮದ ದೀಪ ಬೆಳಗಿಸಿದ ಮಹಾನ್ ವ್ಯಕ್ತಿತ್ವದ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ.






