ಯುವಜನ
ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ ; ಐದು ಜನರ ಜೀವನದಲ್ಲಿ ಹೊಸ ಬೆಳಕು
Views: 75
ಕನ್ನಡ ಕರಾವಳಿ ಸುದ್ದಿ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಅರಸೀಕೆರೆ ತಾಲ್ಲೂಕಿನ, ಕಾರೇಹಳ್ಳಿ ಗ್ರಾಮದ ನಿವಾಸಿ ಮೋನಿಕಾ (18) ಯುವತಿಯಾಗಿದ್ದಾಳೆ.
ಏಪ್ರಿಲ್ 5 ರಂದು ಸಂಜೆ ಸುಮಾರು 6.30 ರ ಸಮಯದಲ್ಲಿ ಬಿ.ಹೆಚ್ ರಸ್ತೆಯ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.
ತೀವ್ರ ಪೆಟ್ಟಾಗಿದ್ದರಿಂದ ಯುವತಿ ಸ್ಥಿತಿ ಗಂಭೀರವಾಗಿದ್ದು ನಂತರ ಮೆದುಳು ನಿಷ್ಕ್ರಿಯವಾಗಿತ್ತು. ವೈದ್ಯರು ಮೋನಿಕಾಳ ಪೋಷಕರಿಗೆ ಈ ವಿಷಯ ತಿಳಿಸಿದ್ದರು. ಇದೀಗ ಪೊಷಕರು ಮಗಳ ಅಂಗಾಂಗ ದಾನಕ್ಕೆ ಮುಂದಾಗಿದ್ದು, 5 ಜೀವಗಳಿಗೆ ಹೊಸ ಬೆಳಕು ನೀಡಿದ್ದಾರೆ.
ಹಲವು ಕನಸುಗಳನ್ನು ಹೊತ್ತಿದ್ದ ಮೋನಿಕಾ, ವಿಧಿಯ ಆಟಕ್ಕೆ ಬಲಿಯಾಗಿದ್ದು, 5 ಜನರ ಜೀವಗಳಿಗೆ ಬೆಳಕು ನೀಡಿದ್ದಾಳೆ.






