ರಾಜಕೀಯ

ಸಾಸ್ತಾನ:ಮನೆಯಲ್ಲಿ ಮತದಾನ ಮಾಡಿ ಆಸ್ಪತ್ರೆಗೆ ತೆರಳಿದ ವೃದ್ಧೆ ಸಾವು 

Views: 55

ಬ್ರಹ್ಮಾವರ : ಹಿರಿಯ ನಾಗರಿಕರ ಕಾರ್ಯಕ್ರಮದಡಿ ಮನೆಯಿಂದಲೇ ಮತದಾನ ಮಾಡಿ ಸ್ವಲ್ಪ ಹೊತ್ತಿನಲ್ಲಿ ವೃದ್ಧೆ ಸಾವನ್ನಪ್ಪಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನದಲ್ಲಿ ನಡೆದಿದೆ.

ಪಾಂಡೇಶ್ವರ ಚಡಗರ ಅಗ್ರಹಾರದ ನಿವಾಸಿ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿ. ಪಿ.ಯಶೋಧಾ ನಾರಾಯಣ ಉಪಾಧ್ಯ (83) ಮೃತಪಟ್ಟವರು. ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಹಿರಿಯ ನಾಗರಿಕರ ಕಾರ್ಯಕ್ರಮದಡಿ ಮನೆಯಿಂದಲೇ ಮತದಾನ ಕಾರ್ಯಕ್ರಮ ನಡೆಯುತ್ತಿರುವಾಗ ಯಶೋಧಾ ಅವರಿಗೆ ಮತದಾನದ ದಿನ ಎದೆ ನೋವು ಕಾಣಿಸಿಕೊಂಡಿತ್ತು. ಆದರೆ, ಅವರು ಮತದಾನ ಮಾಡಿಯೇ ಆಸ್ಪತ್ರೆ ತೆರಳಲು ನಿಶ್ಚಯಿಸಿದ್ದರು. ಮತದಾನದ ಬಳಿಕ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಯಶೋಧಮ್ಮ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button
error: Content is protected !!