ಇತರೆ

ಸಾಸ್ತಾನ ಪಾಂಡೇಶ್ವರದ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ

Views: 104

ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲೆಯ ಸಾಸ್ತಾನ ಮೂಡಹಡು ಗ್ರಾಮದ ಯುವ ಹಾಗೂ ಖ್ಯಾತ ಫೋಟೋಗ್ರಾಫರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.

ಮೃತರನ್ನು ಸಾಸ್ತಾನ ಪಾಂಡೇಶ್ವರ ನಿವಾಸಿ ಗಣೇಶ್ ಮೆಂಡನ್ (38) ಎಂದು ಗುರುತಿಸಲಾಗಿದೆ.

ಅವರು ಫೋಟೋಗ್ರಫಿ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು, ಉತ್ತಮ ಪ್ರತಿಭಾವಂತ ಫೋಟೋಗ್ರಾಫರ್ ಆಗಿ ಹೆಸರು ಮಾಡಿದ್ದರು. ಜೊತೆಗೆ ಕ್ರಿಕೆಟ್ ಆಟಗಾರನಾಗಿಯೂ ಗುರುತಿಸಿಕೊಂಡಿದ್ದರು. ಶನಿವಾರ ಕೊಮೆ ಬೀಚ್‌ನಲ್ಲಿ ಫೋಟೋ ಶೂಟ್ ಮುಗಿಸಿ ರಾತ್ರಿ ಸುಮಾರು 11 ಗಂಟೆಗೆ ಮನೆಗೆ ಬಂದಿದ್ದರು. ಭಾನುವಾರ ಬೆಳಿಗ್ಗೆ ಅವರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

ಈ ಸಂಬಂಧ ಮೃತರ ಪತ್ನಿ ಅಕ್ಷತಾ ನೀಡಿದ ದೂರಿನ ಮೇರೆಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Articles

Back to top button
error: Content is protected !!