ರಾಜಕೀಯ

ಸಿಎಂ ಕುರ್ಚಿ ಫೈಟ್ ಮತ್ತೆ ಮುನ್ನೆಲೆಗೆ, “ನೂರಕ್ಕೆ ನೂರರಷ್ಟು ಡಿಕೆಶಿ ಸಿಎಂ ಆಗುತ್ತಾರೆ”.. ಪುಟ್ಟಣ್ಣ ಹೇಳಿಕೆಗೆ ರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆ!! 

Views: 38

“ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ತರುವಲ್ಲಿ ಶಿವಕುಮಾರ್ ಪಾತ್ರ ಬಹಳಷ್ಟು ದೊಡ್ಡದಿದೆ. ಹಿತ್ತಲ ಬಾಗಿಲಿನಿಂದ ಯಾರ‍್ಯಾರೊ ಬಂದು ಮುಖ್ಯಮಂತ್ರಿಯಾಗಿದ್ದಾರೆ. ಡಿಕೆ ಶಿವಕುಮಾರ್ ಅವರು ನಮ್ಮೂರು ಮನೆಮಗ. ಹಾಗಾಗಿ ಅವರು ಆದಷ್ಟು ಬೇಗ ಸಿಎಂ ಆಗಲಿ ಎಂದು ಆಶಿಸುತ್ತೇನೆ. ಮುಖ್ಯಮಂತ್ರಿಯನ್ನಾಗಿ ಮಾಡುವುದು ಹೈಕಮಾಂಡ್ ತೀರ್ಮಾನ. ನೂರಕ್ಕೆ ನೂರರಷ್ಟು ಡಿಕೆಶಿ ಸಿಎಂ ಆಗುತ್ತಾರೆ”

ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ನೀಡಿದ ಹೇಳಿಕೆ ಈಗ ಸಂಚಲನ ಸೃಷ್ಟಿಸಿ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಒಕ್ಕಲಿಗ ಕಾರ್ಡ್ ಪ್ರಯೋಗಕ್ಕೆ ಪರಿಷತ್ ಸದಸ್ಯ ಪುಟ್ಟಣ್ಣ ಮುನ್ನುಡಿ ಬರೆದಿದ್ದಾರೆ. ಪುಟ್ಟಣ್ಣ ಹೇಳಿಕೆಯ ಆಸಲಿ ಏನು ಎಂಬುದರ ಬಗ್ಗೆ ಈಗ ರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ.

ರಾಮನಗರದಲ್ಲಿ ಪುಟ್ಟಣ್ಣ ಹೇಳಿಕೆಯಿಂದ ಸಿಎಂ ಕುರ್ಚಿ ಕಿತ್ತಾಟಕ್ಕೆ ಮತ್ತಷ್ಟು ಇಂಬು ಸಿಕ್ಕಿದೆ. ಕುರ್ಚಿ ಮೇಲಾಟದ ವಿಚಾರದಕ್ಕೆ ಡಿಕೆಶಿ ಆಪ್ತರು ರಂಗ ಪ್ರವೇಶ ಮಾಡಿ ಬಹಿರಂಗ ಹೇಳಿಕೆ ನೀಡಲು ಆರಂಭಿಸಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಕರ್ನಾಟಕ ಸರ್ಕಾರದ ಅಧಿಕಾರ ಸೂತ್ರ ಏನಾಗಬಹುದು ಎಂಬ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

ಈ ಹಿಂದೆ ಮಾತನಾಡಿದ್ದ ಡಿಕೆಶಿ ನಾನು ಎಷ್ಟು ದಿನ ಅಧ್ಯಕ್ಷನಾಗಿ ಇರುತ್ತೇನೆ ಎಂಬುದು ಮುಖ್ಯವಲ್ಲ. ನಾನು ಅಧಿಕಾರ ಬಿಟ್ಟು ಹೋಗುವ ಮುನ್ನ ಪಕ್ಷದ ಸಂಘಟನೆಗೆ ಭದ್ರ ಬುನಾದಿ ಹಾಕಿಕೊಡುವ ಕೆಲಸ ಮಾಡುತ್ತೇನೆ. ಈ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇನೆ. ಮುಂದಿನ ಮೂರು ನಾಲ್ಕು ತಿಂಗಳಿನಲ್ಲಿ ಕಾರ್ಯಯೋಜನೆ ಸಿದ್ಧಪಡಿಸುತ್ತೇವೆ. ನೀವೆಲ್ಲರೂ ಅದಕ್ಕೆ ಸಿದ್ಧರಾಗಬೇಕು ಎಂದಿದ್ದರು.

 

 

Related Articles

Back to top button
error: Content is protected !!