ರಾಜಕೀಯ

ಸಿಎಂ ಬದಲಾವಣೆ ಕುರಿತ ಮಹತ್ವದ ಹೇಳಿಕೆ…!?

Views: 23

ಕನ್ನಡ ಕರಾವಳಿ ಸುದ್ದಿ: ರಾಜ್ಯ ರಾಜಕಾರಣದ ನಾಯಕತ್ವ ಗೊಂದಲ ಹಾಗೂ ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಮತ್ತು ರಾಷ್ಟ್ರ ರಾಜಕಾರಣದ ಹಲವು ವಿಚಾರಗಳ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಕೇಳಿಬರುತ್ತಿರುವ ನಾಯಕತ್ವ ಬದಲಾವಣೆ ಹಾಗೂ ಖರ್ಗೆ ಅವರೇ ಸಿಎಂ ಆಗಲಿ ಎಂಬ ಕೂಗಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಗೊಂದಲಗಳು ಇರುವುದು ನಿಜ, ಆದರೆ ಅದನ್ನು ಆದಷ್ಟು ಬೇಗ ಬಗೆಹರಿಸುತ್ತೇವೆ. ನಾನು ಸಿಎಂ ಆಗಬೇಕು ಎಂದು ಕೆಲವರು ಹೇಳುತ್ತಾರೆ, ನೀವು (ಮಾಧ್ಯಮಗಳು) ಹೇಳುತ್ತೀರಿ. ಆದರೆ ನಮ್ಮ ಪಕ್ಷದಲ್ಲಿ ಸಿದ್ಧಾಂತ ಮತ್ತು ದಶಕಗಳ ದುಡಿಮೆ ಮುಖ್ಯ. ನಮ್ಮ ನಿರ್ಧಾರಗಳನ್ನು ಹೆಚ್ಚಾಗಿ ಸೋನಿಯಾ ಗಾಂಧಿಯವರೇ ತೆಗೆದುಕೊಳ್ಳುತ್ತಾರೆ.

ಪ್ರಸ್ತುತ ರಾಜ್ಯದಲ್ಲಿ ಮುಖ್ಯಮಂತ್ರಿಗಳಿದ್ದಾರೆ. ಹೀಗಾಗಿ ಈಗಲೇ ಸಿಎಂ ಬದಲಾವಣೆ ವಿಚಾರ ಬರುವುದಿಲ್ಲ. ಒಂದು ವೇಳೆ ಅಂತಹ ಸಂದರ್ಭ ಬಂದರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿ ತೀರ್ಮಾನಿಸುತ್ತೇವೆ. ಸಿಎಂ ಬದಲಾವಣೆಗೆ ಇನ್ನೂ ಸಮಯವಿದೆ, ಆ ಕಾಲ ಬಂದಾಗ ನೋಡೋಣ ಎಂದು ಜಾಣ್ನೆಯ ಉತ್ತರ ನೀಡಿದರು.

ಒಟ್ಟಾರೆಯಾಗಿ, ರಾಜ್ಯದಲ್ಲಿ ತಕ್ಷಣಕ್ಕೆ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಖರ್ಗೆ, ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ವಿರೋಧಿ ಅಲೆಗೆ ಸಾಥ್ ನೀಡುವ ಸುಳಿವು ನೀಡಿದ್ದಾರೆ

Related Articles

Back to top button
error: Content is protected !!