ರಾಜಕೀಯ

ಸಿಎಂ ಬದಲಾವಣೆ ವಿಚಾರ: ಪಕ್ಷದ ತೀರ್ಮಾನಕ್ಕೆ ಬದ್ಧ ಸಿದ್ದರಾಮಯ್ಯ

Views: 13

ಕನ್ನಡ ಕರಾವಳಿ ಸುದ್ದಿ:ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಬದಲಾವಣೆ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ವರಿಷ್ಠರ ಕರೆ ಬಂದರೆ ದೆಹಲಿಗೆ ಹೋಗುತ್ತೇನೆ. ನಮ್ಮ ಪಕ್ಷದ ಹೈಕಮಾಂಡ್ ಹೇಳಿದರೆ 5 ವರ್ಷವೂ ನಾನೇ ಸಿಎಂ ಆಗಿ ಇರುತ್ತೇನೆ. ನಾನು ಹೈಕಮಾಂಡ್ ಮಾತನ್ನು ಮಾತ್ರ ಕೇಳುವುದು, ಬೇರೆ ಯಾರ ಮಾತಿಗೂ ಬೆಲೆ ಇಲ್ಲ. ನೀವು ಎಷ್ಟೇ ಸಲ ಈ ಪ್ರಶ್ನೆಯನ್ನು ಕೇಳಿದರೂ ನನ್ನ ಉತ್ತರ ಹೈಕಮಾಂಡ್ ಅಷ್ಟೇ ಎಂದರು.

ರಾಜ್ಯದಲ್ಲಿ 5 ವರ್ಷವೂ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿ ಇರುತ್ತದೆ. ನನ್ನನ್ನು ಇರಿ ಎಂದರೆ ಇರುತ್ತೇನೆ, ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್. ಬೇರೆ ಯಾರೋ ಏನೇನೊ ಮಾತನಾಡಿದರೆ ಅದು ಅವರ ವೈಯಕ್ತಿಕ. ನಮಗೆ ಹೈಕಮಾಂಡ್ ಅಂತಿಮ ಎಂದು ಹೇಳಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸದ್ಯದಲ್ಲಿಯೇ ನಡೆಸಲಾಗುವುದು ಎಂದು ಇದೇ ವೇಳೆ ಹೇಳಿದರು.

Related Articles

Back to top button
error: Content is protected !!