ರಾಜಕೀಯ

ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡ ಬೆನ್ನಲ್ಲೇ ಸಿಎಂ ಕಾಲಿಗೆ ಬಿದ್ದು ನಮಸ್ಕರಿಸಿದ ಡಿಕೆಶಿ

Views: 90

ಕನ್ನಡ ಕರಾವಳಿ ಸುದ್ದಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡ ಬೆನ್ನಲ್ಲೇ, ಇಂದು ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಆಯೋಜಿಸಲಾಗಿದ್ದ ಆಪ್ತ ಸಚಿವರು ಹಾಗೂ ಶಾಸಕರ ಉಪಹಾರ ಕೂಟದಲ್ಲಿ ಭಾವುಕ ಘಟನೆ ನಡೆದಿದ್ದು, ಸಭೆಗೆ ಆಗಮಿಸುತ್ತಿದ್ದಂತೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.

ಕಾವೇರಿ ನಿವಾಸಕ್ಕೆ ಎಂಟ್ರಿ ಕೊಟ್ಟ ಡಿ.ಕೆ. ಶಿವಕುಮಾರ್ ಅವರು ನೇರವಾಗಿ ಸಿದ್ದರಾಮಯ್ಯ ಅವರ ಬಳಿ ತೆರಳಿ, ಅತ್ಯಂತ ಗೌರವದಿಂದ ಅವರ ಕಾಲಿಗೆ ನಮಸ್ಕರಿಸಿದರು. ಈ ವೇಳೆ ಸಿದ್ದರಾಮಯ್ಯ ಅವರು ಡಿಕೆಶಿ ಅವರನ್ನು ಕೈಹಿಡಿದು ಎಬ್ಬಿಸಿ, ಅತ್ಯಂತ ಆತ್ಮೀಯವಾಗಿ ಆಲಿಂಗಿಸಿಕೊಂಡರು. ರಾಜ್ಯ ರಾಜಕಾರಣದಲ್ಲಿ ಸದಾ ಸಣ್ಣ ಮಟ್ಟದ ಶೀತಲ ಸಮರ ಎಂಬಂತೆ ಬಿಂಬಿತವಾಗುತ್ತಿದ್ದ ಎರಡು ಸಂದರ್ಭದಲ್ಲಿ ಇಂದು ಕಂಡುಬಂದ ಈ ಅಪರೂಪದ ಸೌಹಾರ್ದತೆಯ ಫೋಟೋಗಳು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಹೈಕಮಾಂಡ್ ಮಟ್ಟದಲ್ಲಿ ‘ಅವಧಿ ಹಂಚಿಕೆ’ ಸೂತ್ರ ಸಿದ್ಧವಾಗಿತ್ತು ಎನ್ನಲಾಗಿತ್ತು. ತಮಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕೆಂದು ಹೈಕಮಾಂಡ್ ಮುಂದೆ ನಿರಂತರವಾಗಿ ಇಂಗಿತ ವ್ಯಕ್ತಪಡಿಸುತ್ತಾ ಬಂದಿದ್ದ ಡಿ.ಕೆ. ಶಿವಕುಮಾ‌ರ್ ಅವರ ಸುದೀರ್ಘ ಪ್ರಯತ್ನಕ್ಕೆ ಈಗ ಪ್ರತಿಫಲ ಸಿಕ್ಕಂತಿದೆ. ಹೈಕಮಾಂಡ್ ಅಂತಿಮವಾಗಿ ಡಿಕೆಶಿ ಅವರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಲು ಹಸಿರು ನಿಶಾನೆ ತೋರಿದ್ದರಿಂದಲೇ ಇಂದಿನ ಉಪಹಾರ ಸಭೆ ಇಷ್ಟೊಂದು ಮಹತ್ವ ಪಡೆದುಕೊಂಡಿದೆ.

 

 

 

Related Articles

Back to top button
error: Content is protected !!