‘ಸಿದ್ದರಾಮಯ್ಯ ಇಲ್ಲಾಂದ್ರೆ ಕಾಂಗ್ರೆಸ್ ಇಲ್ಲ’ ಮಾಜಿ ಸಚಿವ ಕೆ. ಎನ್.ರಾಜಣ್ಣ ಹೇಳಿಕೆಗೆ ಮತ್ತೊಂದು ಸಂಚಲನ!!
Views: 43
ಕನ್ನಡ ಕರಾವಳಿ ಸುದ್ದಿ : ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದು ನ.20ಕ್ಕೆ ಎರಡೂವರೆ ವರ್ಷ ಪೂರೈಸಿದೆ. ಈ ನಡುವೆ ಚಾಮರಾಜನಗರದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಬೆನ್ನಲ್ಲೇ ಕೆ ಎನ್ ರಾಜಣ್ಣ ಅವರು ನೀಡಿರುವ ಹೇಳಿಕೆ ರಾಜಕೀಯದಲ್ಲಿ ಮತ್ತೊಂದು ಸಂಚಲನ ಮೂಡಿಸಿದೆ.
ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಕೆ. ಎನ್. ರಾಜಣ್ಣ, ಸಿದ್ದರಾಮಯ್ಯ ಇಲ್ಲಾಂದ್ರೆ ಕಾಂಗ್ರೆಸ್ ಇಲ್ಲ ಎಂದು ಹೇಳಿದ್ರು.
ನಮ್ಮಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ, ಈ ವೇಳೆ ಬದಲಾವಣೆ ಮಾತು ಹೇಗೆ ಬರಲಿದೆ, ನನಗೆ ಮಂತ್ರಿ ಸ್ಥಾನ ಸಿಗುವುದಕ್ಕಿಂತ, ನಾನು ಮಂತ್ರಿಯಾಗುವುದಕ್ಕಿಂತ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವುದು ನನಗೆ ಮುಖ್ಯ ಎನ್ನುವ ಮೂಲಕ ಅವರ ಬೆಂಬಲಕ್ಕೆ ನಿಂತಿದ್ದಾರೆ.
ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ, ಅಧಿಕಾರ ಗಟ್ಟಿಯಾಗಿದೆ, ಮುಂದೆಯೂ ಗಟ್ಟಿಯಾಗಿರಲಿದೆ ಎನ್ನುವ ಮೂಲಕ ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ ಮಾತಿಗೆಲ್ಲ ಫುಲ್ ಸ್ಟಾಪ್ ಹಾಕಿದ್ದರು.
ನವೆಂಬರ್ ಕ್ರಾಂತಿ ಎಂಬ ವಿಷಯವನ್ನು ಮಾಧ್ಯಮದವರೇ ಸೃಷ್ಟಿಸಿದರು. ಜನರ ಆಸೆಯಂತೆ ಐದು ವರ್ಷ ಸರ್ಕಾರ ನಡೆಸಿ ನಂತರವೂ ಪುನ: ಕಾಂಗ್ರೆಸ್ ಪಕ್ಷವೇ ಆಯ್ಕೆಯಾಗಿ ಬರಲಿದೆ. ಇದು ಅನಾವಶ್ಯಕ ಚರ್ಚೆ, ಎರಡೂವರೆ ವರ್ಷದ ನಂತರ ಸಂಪುಟ ಪುನರ್ರಚನೆ ಮಾಡಬಹುದು ಎಂದು ತಿಳಿಸಿದ ನಂತರವಷ್ಟೇ ಮುಖ್ಯಮಂತ್ರಿ ಬದಲಾವಣೆಯ ವಿಷಯ ಮುನ್ನಲೆಗೆ ಬಂದಿರುವುದು. ಸಂಪುಟ ಪುನಾರಚನೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಬೇಕಿದೆ. ಒಟ್ಟು 34 ಸಚಿವರ ಸ್ಥಾನಗಳಿದ್ದು, ಅದರಲ್ಲಿ ಎರಡು ಸ್ಥಾನಗಳು ಖಾಲಿ ಇವೆ. ಸಂಪುಟ ಪುನಾರಚನೆ ಸಂದರ್ಭದಲ್ಲಿ ಈ ಖಾಲಿ ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.
”ನಾನು ಕಾಂಗ್ರೆಸ್ಗೆ ಬಂದ ಮೇಲೆ 2 ಬಾರಿ ಮುಖ್ಯಮಂತ್ರಿಯಾದೆ, ಜೆಡಿಎಸ್ನಲ್ಲೇ ಇದ್ದಿದ್ರೆ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಆಗುತ್ತಿರಲಿಲ್ಲ, ಹೆಚ್. ಡಿ. ದೇವೇಗೌಡ ಹಾಗೂ ಅವರ ಮಕ್ಕಳು ನನ್ನನ್ನು ಸಿಎಂ ಆಗೋಕೆ ಬಿಡ್ತಾಯಿರಲಿಲ್ಲ. ಇಂದಿಗೆ ಸರ್ಕಾರಕ್ಕೆ ಎರಡೂವರೆ ವರ್ಷ ಆಗಿದೆ. ಕರ್ನಾಟಕದ ಜನರ ಆಶೀರ್ವಾದದಿಂದ ಮುಖ್ಯಮಂತ್ರಿ ಆಗಿದ್ದೇನೆ, ಯಾವುದೇ ಜಾತಿ, ಮತ, ಪರ ಇಲ್ಲ, ಎಲ್ಲರ ಪರ ಕೆಲಸ ಮಾಡಿದ್ದೇನೆ, ಮುಂದೆಯೂ ಮಾಡುತ್ತೇನೆ” ಎನ್ನುವ ಮೂಲಕ ಪರೋಕ್ಷವಾಗಿ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆಂದು ಸಂದೇಶ ರವಾನಿಸಿದ್ದಾರೆ.






