ಕ್ರೀಡೆ
ಸಿದ್ದಾಪುರ ಜ್ಞಾನಸರಸ್ವತಿ ಪಿಯು ಕಾಲೇಜು:ಜಿಲ್ಲಾ ಮಟ್ಟದ ಶಾಟ್‌ಪುಟ್ ನಲ್ಲಿ ಸೃಜನ್ ಕುಲಾಲ್ ಅದ್ವಿತೀಯ ಸಾಧನೆ
Views: 58
ಕನ್ನಡ ಕರಾವಳಿ ಸುದ್ದಿ: ಉಡುಪಿಯ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶಾಟ್‌ಪುಟ್ ಎಸೆತ ಸ್ಪರ್ಧೆಯಲ್ಲಿ ಸಿದ್ದಾಪುರದ ಜ್ಞಾನಸರಸ್ವತಿ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಸೃಜನ್ ಕುಲಾಲ್ ತೃತೀಯ ಸ್ಥಾನ ಗಳಿಸಿದ್ದಾರೆ.
ಸದಾಶಿವ ಮತ್ತು ಸುಜಾತಾ ದಂಪತಿಗಳ ಪುತ್ರರಾಗಿರುವ ಸೃಜನ್ ಕುಲಾಲ್ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾಗಿದ್ದಾರೆ. ಸೃಜನ್ ಸಾಧನೆಗೆ ಸುಮುಖ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ, ಪ್ರಾಂಶುಪಾಲ ಅಮರೇಶ್ ಹೆಗ್ಡೆ ,ಉಪ ಪ್ರಾಂಶುಪಾಲ ಹರ್ಷ ಶೆಟ್ಟಿ ಹಾಗೂ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.






