ಸಿದ್ದಾಪುರ ಜ್ಞಾನ ಸರಸ್ವತಿ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ
Views: 13
ಕನ್ನಡ ಕರಾವಳಿ ಸುದ್ದಿ: ಸಿದ್ದಾಪುರ ಜ್ಞಾನಸರಸ್ವತಿ ಸಮೂಹ ಸಂಸ್ಥೆಗಳ ವತಿಯಿಂದ ಆಯೋಜಿಸಲಾದ ವಾರ್ಷಿಕ ಕ್ರೀಡಾಕೂಟ ಸಿದ್ದಾಪುರದ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ನಡೆಯಿತು.
ಸುಮುಖ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಶ್ರೀ ಬಿ.ಎಸ್. ಸುರೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ವರ್ಲ್ಡ್ ಫೈರ್‌ಫೈಟರ್ ಗೇಮ್ಸ್–2024 (ಡೆನ್ಮಾರ್ಕ್) ಚಿನ್ನದ ಪದಕ ವಿಜೇತ ಶ್ರೀ ಅಶ್ವಿನ್ ಸನಿಲ್ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ, ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮನ್ವಯ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುತ್ತವೆ ಎಂದರು.
ಗೌರವ ಅತಿಥಿಗಳಾಗಿ ಪ್ರಸಿದ್ಧ ಯಕ್ಷಗಾನ ಭಾಗವತ ಶ್ರೀ ರಾಘವೇಂದ್ರ ಆಚಾರ್ಯ ಜನ್ಸಾಲೆ ಜ್ಞಾನ ಸರಸ್ವತಿ ಪದವಿಪೂರ್ವ ಕಾಲೇಜಿನ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಸಿದ್ದಾಪುರ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶ್ರೀಲತಾ ಶೆಟ್ಟಿ, ಸುಮುಖ ಎಜುಕೇಷನಲ್ ಟ್ರಸ್ಟ್ ಕಾರ್ಯದರ್ಶಿ ಶ್ರೀ ಪಾಂಡುರಂಗ ಪಡಿಯಾರ್, ಸರ್ಕಾರಿ ಪ್ರೌಢಶಾಲೆ ಸಿದ್ದಾಪುರದ ಮುಖ್ಯೋಪಾಧ್ಯಾಯ ಶ್ರೀ ಚಂದ್ರ ಕುಲಾಲ್, ಸಿದ್ದಾಪುರ ಪಂಚಾಯತ್ ಸದಸ್ಯರುಗಳಾದ ಶ್ರೀ ಗೋಪಾಲ ಕಾಂಚನ್ ಹಾಗೂ ಶ್ರೀ ಭಾಸ್ಕರ ಶೆಟ್ಟಿ, ಉಪ ಪ್ರಾಂಶುಪಾಲರಾದ ಹರ್ಷ ಶೆಟ್ಟಿ ಉಪಸ್ಥಿತರಿದ್ದರು.
ಜ್ಞಾನ ಸರಸ್ವತಿ ಪಿಯು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಅಮರೇಶ್ ಹೆಗಡೆ ಅವರು ಅತಿಥಿಗಳನ್ನು ಸ್ವಾಗತಿಸಿದರು. ಸರಸ್ವತಿ ವಿದ್ಯಾಲಯದ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತಾ ಗಣೇಶ್ ಅವರು ವಂದನಾರ್ಪಣೆ ಸಲ್ಲಿಸಿದರು.ಸಭಾ ಕಾರ್ಯಕ್ರಮದ ನಿರೂಪಣೆಯನ್ನು ಕನ್ನಡ ವಿಭಾಗದ ನಾಗರಾಜ್ ಅವರು ನಡೆಸಿಕೊಟ್ಟರು. ನಂತರ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಿತು.






