ಸಿಪಿ ಯೋಗೇಶ್ವರ್ ಸಮಾಜವಾದಿ ಪಕ್ಷದಿಂದ ಸ್ಪರ್ಧೆ ಮಾಡುತ್ತಾರ !?

Views: 44
ಕನ್ನಡ ಕರಾವಳಿ ಸುದ್ದಿ: ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಣೆಯಾಗಿದೆ. ಎಲ್ಲಾ ಪಕ್ಷಗಳಿಗೆ ತಲೆ ನೋವಾಗಿ ಕಾಡುತ್ತಿರುವ ಕ್ಷೇತ್ರ ಚನ್ನಪಟ್ಟಣ ತಾನು ಸ್ಪರ್ಧಿಸುವುದು ಖಚಿತ ಎಂದು ಘೋಷಿಸಿರುವ ಮಾಜಿ ಶಾಸಕ ಸಿಪಿ ಯೋಗೇಶ್ವರ್ ಅವರು ಸ್ಪರ್ಧೆ ಯಾವ ಪಕ್ಷದಿಂದ ಎಂಬ ಗುಟ್ಟನ್ನು ಬಿಟ್ಟು ಕೊಟ್ಟಿಲ್ಲ ಈ ನಡೆಯಿಂದ ಬಿಜೆಪಿ- ಜೆಡಿಎಸ್ ಮೈತ್ರಿಗೆ ಸವಾಲಾಗಿ ಕಾಡುತ್ತಿದೆ ತಮ್ಮ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಲು ಜೆಡಿಎಸ್ ಸಿದ್ಧವಿಲ್ಲ ಆದರೆ ಕಾಂಗ್ರೆಸ್ ಮಾತ್ರ ಯೋಗೇಶ್ವರ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲು ಸಜ್ಜಾಗಿ ನಿಂತಿದೆ.
ಚನ್ನಪಟ್ಟಣ ಉಪಚುನಾವಣಾ ಅಖಾಡದಲ್ಲಿ ಯೋಗೇಶ್ವರ ಹೊಸ ಟ್ವಿಸ್ಟ್ ನೀಡಿದ್ದು, ಸಮಾಜವಾದಿ ಪಕ್ಷದ ಬಿ ಫಾರ್ಮ್ ಪಡೆದುಕೊಂಡಿದ್ದಾರೆ. ಇದರೊಂದಿಗೆ ಯೋಗೇಶ್ವರ ಸಮಾಜವಾದಿ ಪಕ್ಷದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಕುತೂಹಲ ಗರಿಗೆದರುವಂತೆ ಮಾಡಿದ್ದಾರೆ.
2013ರಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದ ಯೋಗೇಶ್ವರ್ ಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿ ಕೊನೆ ಕ್ಷಣದಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಮತ್ತೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದು. ಇದೀಗ ಮತ್ತೆ ಟಿಕೆಟ್ ಜಗಳ ಆರಂಭಗೊಂಡಿದೆ.
ಯೋಗೇಶ್ವರ ಸಮಾಜವಾದಿ ಪಕ್ಷದ ರಾಜ್ಯ ಘಟಕದ ಪದಾಧಿಕಾರಿಗಳಿಂದ ಟಿಕೆಟ್ ಸ್ವೀಕರಿಸುತ್ತಿರುವ ಫೋಟೋ ಜಾಲತಾಣದಲ್ಲಿ ಹರಿದಾಡುತ್ತಿದೆ. ಯೋಗೇಶ್ವರ ಸಮಾಜವಾದಿ ಪಕ್ಷದಿಂದ ಮತ್ತೆ ಸ್ಪರ್ಧೆ ಮಾಡುತ್ತಾರಾ..ಇಲ್ಲವೆ ಎನ್‌ಡಿಎ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಟಾಂಗ್ ನೀಡಲು ಈ ಫೋಟೋವನ್ನು ತಮ್ಮ ಬೆಂಬಲಿಗರ ಮೂಲಕ ಹರಿದು ಬಿಟ್ಟು ಹೊಸ ರಾಜಕೀಯ ಗೇಮ್ ಪ್ಲಾನ್ ಮಾಡುತ್ತಿದ್ದಾರೆ ಕಾಯ್ದು ನೋಡಬೇಕಿದೆ.






