ಶಿಕ್ಷಣ

ಸುಜ್ಞಾನ ಎಜುಕೇಶನಲ್ ಟ್ರಸ್ಟ್: ಯಡಾಡಿ- ಮತ್ಯಾಡಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ 

Views: 0

ಕನ್ನಡ ಕರಾವಳಿ ಸುದ್ದಿ: ಕುಂದಾಪುರ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಪ್ರವರ್ತಿತ ಸುಜ್ಞಾನ ಪದವಿ ಪೂರ್ವ ಕಾಲೇಜು, ಕುಂದಾಪುರ, ಸುಜ್ಞಾನ ನ್ಯಾಷನಲ್ ಪದವಿಪೂರ್ವ ಕಾಲೇಜು ಬಾರ್ಕೂರು, ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾರಣ್ಯ ಆಂಗ್ಲ ಮಾಧ್ಯಮ ಗ್ಲೋಬಲ್ ಶಾಲೆ ಇದರ ಸಂಯುಕ್ತ ಆಶ್ರಯದಲ್ಲಿ ಯಡಾಡಿ ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ವಿಜೃಂಭಣೆಯಿಂದ ಆಚರಿಸಲಾಯಿತು.

ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದ ಮುಖ್ಯಮಂತ್ರಿಗಳ ಮಾಜಿ ಕಾನೂನು ಸಲಹೆಗಾರ ಮತ್ತು ಹಿರಿಯ ವಕೀಲರಾದ ದಿವಾಕರ್ ರಾವ್ ಮಾತನಾಡಿ, ಅವಕಾಶಗಳು ಕೇವಲ ನಗರ ಪ್ರದೇಶಕ್ಕೆ ಮಾತ್ರ ಸೀಮಿತವಲ್ಲ ಹಳ್ಳಿಗಳಲ್ಲಿಯೂ ಸಹ ಉತ್ತಮ ಶಿಸ್ತು ಬದ್ಧವಾಗಿ ಸುಜ್ಞಾನ ಸಂಸ್ಥೆಯವರು ನಡೆಸಿದ ಕಾರ್ಯಕ್ರಮಕ್ಕೆ ಶ್ಲಾಘಿಸಿದರು.

ವಿದ್ಯಾರ್ಥಿಗಳಲ್ಲಿ ಸಾಮರಸ್ಯ, ಸಹೋದರತ್ವ ಇನ್ನಷ್ಟು ಹೆಚ್ಚಾಗಬೇಕು, ಭಾರತ ಶಕ್ತಿಶಾಲಿ ಸಮೃದ್ಧ ಸಮಾನತೆ ಮಾನವೀಯ ಮತ್ತು ಸುಸ್ಥಿರ ರಾಷ್ಟ್ರವನ್ನಾಗಿಸುವ ಜವಾಬ್ದಾರಿ ನಮ್ಮ ಮೇಲಿದೆ, ಶಿಕ್ಷಣ ಉದ್ಯೋಗ ವಿಜ್ಞಾನ ಕ್ರೀಡೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಸುಜ್ಞಾನ ಶಿಕ್ಷಣ ಸಂಸ್ಥೆ ಎತ್ತರ ಮಟ್ಟದಲ್ಲಿ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾರೆ ಎಂದು ಕೊಂಡಾಡಿದರು.

ವೇದಿಕೆಯಲ್ಲಿ ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಕೋಶಾಧಿಕಾರಿ ಭರತ್ ಶೆಟ್ಟಿ, ಸುಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಂಜನ್ ಶೆಟ್ಟಿ, ಬಾರ್ಕೂರು ಸುಜ್ಞಾನ ಪಿಯು ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಶೆಟ್ಟಿ, ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಪ್ರದೀಪ್ ಶೆಟ್ಟಿ, ವಿದ್ಯಾರಣ್ಯಗ್ಲೋಬಲ್ ಆಂಗ್ಲ ಮಾಧ್ಯಮ ಶಾಲೆಯ ಅನಿತಾ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮವನ್ನು ಶಾಲಾ ಶಿಕ್ಷಕ ವಿನಯ್ ಕುಮಾರ್  ನಿರೂಪಿಸಿ, ಸ್ವಾಗತಿಸಿ, ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ಧ್ವಜಾರೋಹಣ ಕಾರ್ಯಕ್ರಮವನ್ನು ನಿರೂಪಿಸಿದರು.

ಈ ಸಂದರ್ಭದಲ್ಲಿ ಸುನಾದ ಸಂಗಮ ದೇಶ ಭಕ್ತಿಗಳ ಕಾರ್ಯಕ್ರಮ ಹಾಗೂ ಸಂಗೀತ ಕಾರ್ಯಕ್ರಮವನ್ನು ಖ್ಯಾತ ಗಾಯಕ ಜಗದೀಶ್ ಪುತ್ತೂರು ಮತ್ತು ತಂಡದವರು ನಡೆಸಿಕೊಟ್ಟರು. ಶಿಸ್ತುಬದ್ಧವಾದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಶಾಲೆಯ ಮೆರುಗನ್ನು ಹೆಚ್ಚಿಸಿದೆ.

Related Articles

Back to top button
error: Content is protected !!