ಸುಜ್ಞಾನ ಎಜುಕೇಶನಲ್ ಟ್ರಸ್ಟ್: ಕುಂದಾಪುರ ವಲಯ ಮಟ್ಟದ ಕ್ರೀಡಾಕೂಟ ಸಮಾರೋಪ ಸಮಾರಂಭ
Views: 29
ಕನ್ನಡ ಕರಾವಳಿ ಸುದ್ದಿ: ಶಾಲಾ ಶಿಕ್ಷಣ ಇಲಾಖೆ ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ (ಸುಜ್ಞಾನ ಎಜುಕೇಶನಲ್ ಟ್ರಸ್ಟ್) ಇವುಗಳ ಸಂಯುಕ್ತ ಆಶ್ರಯದಲ್ಲಿ 14 ಮತ್ತು 17 ವರ್ಷದೊಳಗಿನ ಬಾಲಕ-ಬಾಲಕಿಯರ ಕುಂದಾಪುರ ವಲಯ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಅವರು, ಪಂದ್ಯಾಟಗಳಲ್ಲಿ ಭಾಗವಹಿಸಿ ವಿಜೇತರಾದ ಎಲ್ಲಾ ಕ್ರೀಡಾಪಟುಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ಇಲಾಖೆಯು ಹಮ್ಮಿಕೊಳ್ಳುವ ಇಂತಹ ಯಾವುದೇ ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಸಂಸ್ಥೆಯ ವತಿಯಿಂದ ಸಂಪೂರ್ಣ ಸಹಕಾರ ಹಾಗೂ ಬೆಂಬಲ ನೀಡಲು ಸದಾ ಸಿದ್ಧ ಎಂದು ಶುಭ ಹಾರೈಸಿದರು.
ಕ್ರೀಡಾಕೂಟದಲ್ಲಿ 14ರ ವಯೋಮಾನದ ಬಾಲಕರು ಮತ್ತು ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಹಾಲಾಡಿ ವೃತ್ತ ಪಡೆದುಕೊಂಡಿತು.
17ರ ವಯೋಮಾನದ ಬಾಲಕರ ಸಮಗ್ರ ಪ್ರಶಸ್ತಿಯನ್ನು ಹಾಲಾಡಿ ವೃತ್ತ ಪಡೆದುಕೊಂಡಿತು.
17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಕೋಟೇಶ್ವರ ವೃತ್ತ ಪಡೆದುಕೊಂಡಿತು.
ಕ್ರೀಡಾಕೂಟದ ಸಮಗ್ರ ತಂಡ ಪ್ರಶಸ್ತಿಯನ್ನು ಕೋಟೇಶ್ವರ ವೃತ್ತ ಪಡೆದುಕೊಂಡಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಕುಂದಾಪುರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೋಭಾ ಶೆಟ್ಟಿ ಅವರು ಮಾತನಾಡಿ, ಕ್ರೀಡಾಕೂಟವನ್ನು ಅತ್ಯಂತ ಅದ್ದೂರಿಯಾಗಿ ಮತ್ತು ಶಿಸ್ತುಬದ್ಧವಾಗಿ ಆಯೋಜಿಸಿದ ವಿದ್ಯಾರಣ್ಯ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಸರ್ವ ಸಿಬ್ಬಂದಿ ವರ್ಗದವರ ಶ್ರಮವನ್ನು ಶ್ಲಾಘಿಸಿ ಅಭಿನಂದಿಸಿದರು.
ಈ ಶುಭ ಸಮಾರಂಭದಲ್ಲಿ ಸುಜ್ಞಾನ ಎಜುಕೇಶನ್ ಟ್ರಸ್ಟ್ನ ಖಜಾಂಚಿ ಭರತ್ ಶೆಟ್ಟಿ, ಕುಂದಾಪುರ ವಲಯದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಜಿ., ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಉದಯ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕುಸುಮಕರ ಶೆಟ್ಟಿ, ಕುಂದಾಪುರ ತಾಲೂಕು ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಉದಯ ಮಡಿವಾಳ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ಕಿಶನ್ ರಾಜ್ ಶೆಟ್ಟಿ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ರಾಜಾರಾಮ್ ಸೇರ್ವೇಗಾರ್, ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಹಾಗೂ ಅಧ್ಯಕ್ಷರಾದ ಉಷಾಲತಾ ಶೆಟ್ಟಿ ಉಪಸ್ಥಿತರಿದ್ದರು.

ಸಮಾರೋಪ ಸಮಾರಂಭವನ್ನು ವಿಜಯಕುಮಾರ್ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕರು ಅಮೃತ ಭಾರತಿ ಪದವಿ ಪೂರ್ವ ಕಾಲೇಜು ಹೆಬ್ರಿ ಮತ್ತು ಚಂದ್ರಶೇಖರ್ ಬೀಜಾಡಿ ನಿರೂಪಿಸಿದರು. ಸುಜ್ಞಾನ ಸಮೂಹ ಶಿಕ್ಷಣ ಸಂಸ್ಥೆಗಳ ದೈಹಿಕ ಶಿಕ್ಷಣ ಶಿಕ್ಷಕರು ಕ್ರೀಡಾಕೂಟವನ್ನು ಸಂಘಟಿಸಿದ್ದರು.






