ಶಿಕ್ಷಣ

ಸುಜ್ಞಾನ ಎಜುಕೇಶನಲ್ ಟ್ರಸ್ಟ್:  77ನೇ ಗಣರಾಜ್ಯೋತ್ಸವದ ಸಂಭ್ರಮ

ಸಂವಿಧಾನದಲ್ಲಿನ ಜವಾಬ್ದಾರಿಗಳ ಅರಿವು ಅತ್ಯಗತ್ಯ--- ಡಾ.ರಮೇಶ್ ಶೆಟ್ಟಿ

Views: 12

ಕನ್ನಡ ಕರಾವಳಿ ಸುದ್ದಿ: ಯುವಜನತೆ ಸಂವಿಧಾನದಲ್ಲಿ ಅಳವಡಿಸಿರುವ ಜವಾಬ್ದಾರಿಗಳನ್ನು ಅರಿತುಕೊಂಡು ಸದೃಢ ದೇಶಕಟ್ಟುವಲ್ಲಿ ಶ್ರಮಿಸಬೇಕು ಎಂದು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಹೇಳಿದರು.

ಸುಜ್ಞಾನ ಎಜುಕೇಶನಲ್ ಟ್ರಸ್ಟ್ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, “ವಿಶ್ವಕ್ಕೆ ಸದ್ವಿಚಾರ, ಸಂಸ್ಕೃತಿ, ಸಂಸ್ಕಾರ ಸೇರಿದಂತೆ ಶ್ರೇಷ್ಠ ಮೌಲ್ಯಗಳನ್ನು ನೀಡಿರುವ ದೇಶ ನಮ್ಮದು. ಈ ಹಿರಿಮೆಯನ್ನು ಅರಿತು ನಾವೆಲ್ಲರೂ ಜಾತಿ, ಮತ, ಪ್ರಾಂತ್ಯದಂತಹ ಸಂಕುಚಿತ ಭಾವನೆಗಳನ್ನು ಮೀರಿ ದೇಶದ ಅಭಿವೃದ್ಧಿಗೆ ಹಾಗೂ ಉತ್ತಮ ಭವಿಷ್ಯಕ್ಕೆ ಕೊಡುಗೆ ನೀಡಬೇಕು” ಎಂದರು.

ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ವಿನಯ್ ಕುಮಾರ್ ನಿರೂಪಿಸಿದರು. ಪ್ರಾಂಶುಪಾಲರಾದ ರಂಜನ್ ಬಿ.ಶೆಟ್ಟಿ, ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ್ ಹಾಗೂ ಕಾಲೇಜಿನ ಭೋದಕ, ಭೋದಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Related Articles

Back to top button
error: Content is protected !!