ಶಿಕ್ಷಣ
ಸುಜ್ಞಾನ ಪಿಯು ಕಾಲೇಜಿನ ಮೊಜಮ್ ಕರಾಟೆ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ
Views: 8
ಕನ್ನಡ ಕರಾವಳಿ ಸುದ್ದಿ: ಕುಂದಾಪುರದ ಯಡಾಡಿ- ಮತ್ಯಾಡಿಯಲ್ಲಿರುವ ಪ್ರತಿಷ್ಠಿತ ಸುಜ್ಞಾನ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮೊಜಮ್ ಪದವಿ ಪೂರ್ವ ಕಾಲೇಜಿನ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಜೇತನಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾಧನೆಗೈದ ವಿದ್ಯಾರ್ಥಿ ಮೊಜಮ್ ಅವರು ಕುಂದಾಪುರ ತಾಲೂಕಿನ ಬಸ್ರೂರು ನಿವಾಸಿ ಅಬ್ದುಲ್ ಮುಬಿನ್ ತಸ್ಮಿಯಾ ದಂಪತಿಯ ಪುತ್ರ. ಹಾಸನಜಿಲ್ಲೆ ಬೇಲೂರಿನ ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ಗೆಲ್ಲುವ ಮೂಲಕ ವಿದ್ಯಾರ್ಥಿಯು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲರಾದ. ರಂಜನ್ ಬಿ. ಶೆಟ್ಟಿ ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.






