ರಾಜಕೀಯ
ಸುದ್ದಿಗೋಷ್ಠಿ ನಡೆಸುತ್ತಿದ್ದಾಗಲೇ ಹೃದಯಾಘಾತದಿಂದ ಕಾಂಗ್ರೆಸ್ ಕಾರ್ಯಕರ್ತ ಸಾವು

Views: 124
ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತ ಸಿ.ಕೆ. ರವಿಚಂದ್ರನ್ ಹಠಾತ್ ಹೃದಯಾಘಾತದಿಂದ ಕುಸಿದ್ದು ಬಿದ್ದು ನಿಧನರಾಗಿದ್ದಾರೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಸಂಘ ಸುದ್ದಿಗೋಷ್ಠಿ ಏರ್ಪಡಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಆದೇಶ ನೀಡಿರುವುದನ್ನು ವಿರೋಧಿಸಿ ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಈ ಘಟನೆ ನಡೆದಿದ್ದು, ಕುಸಿದು ಬಿದ್ದ ಸಿ.ಕೆ. ರವಿಚಂದ್ರನ್ ಅವರನ್ನು ಕೂಡಲೇ ಸಮೀಪದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪೋರ್ಟಿಸ್ ಆಸ್ಪತ್ರೆಗೆ ಕಳುಹಿಸಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.






