ಕರಾವಳಿ
ಸುಬ್ರಹ್ಮಣ್ಯ:ಮದುವೆಯಾಗಿ ಹೊಸ ಜೀವನಕ್ಕೆ ಕಾಲಿಟ್ಟಿದ್ದ ನವ ವಿವಾಹಿತ ಸಿಡಿಲು ಬಡಿದು ಸಾವು

Views: 160
ಮಂಗಳೂರು: ಎರಡು ವಾರದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸುಬ್ರಹ್ಮಣ್ಯ ಸಮೀಪ ಕಾರ್ ವಾಷಿಂಗ್ ಉದ್ಯಮ ನಡೆಸಿಕೊಂಡು ಬಂದಿದ್ದ ಸೋಮಸುಂದರ್ (34) ಸಾವನ್ನಪ್ಪಿದ ದುರ್ದೈವಿ. ಸೋಮಸುಂದರ್ ಎರಡು ವಾರಗಳ ಹಿಂದಷ್ಟೇ ಮದುವೆಯಾಗಿ ಹೊಸ ಜೀವನಕ್ಕೆ ಕಾಲಿರಿಸಿದ್ದರು. ಮಳೆ ಆರಂಭಕ್ಕೂ ಮೊದಲು ಸಂಜೆ ಗುಡುಗು ಸಹಿತ ಮಳೆ ಸುರಿಯುತ್ತಿದ್ದ ಕಾರಣ ಅಂಗಳದಲ್ಲಿದ್ದ ಅಡಿಕೆ ರಾಶಿ ಮಾಡುತ್ತಿದ್ದರು.
ಇದೇ ವೇಳೆ ನವವಿವಾಹಿತನಿಗೆ ಭಯಾನಕವಾಗಿ ಸಿಡಿಲು ಬಡಿದಿದೆ. ತಕ್ಷಣ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ವ್ಯಕ್ತಿ ಮೃತಪಟ್ಟಿದ್ದಾನೆ. ಇದರಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.






