ರಾಜಕೀಯ

ಸುಮಲತಾ ಪಕ್ಷೇತರ ಸ್ಪರ್ಧೆಯಿಂದ ಹಿಂದೆ ಸರಿದು ಬಿಜೆಪಿ ಸೇರ್ಪಡೆಗೆ ಕಾರಣಗಳೇನು ?

Views: 85

ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ, ಆದರೆ, ಮಂಡ್ಯವನ್ನು ನಾನು ಎಂದಿಗೂ ಬಿಡುವುದಿಲ್ಲ ಎಂದು ಸುಮಲತಾ ಅಂಬರೀಶ್‌ ಅವರು ಬುಧವಾರ ಹೇಳಿದ್ದು, ಮುಂದಿನ ರಾಜಕೀಯ ಬೆಳವಣೆಗೆಗಳು ಮಂಡ್ಯದಿಂದಲೇ ಶುರುವಾಗಲಿದೆ ಎಂದಿದ್ದಾರೆ.

ಹಾಗಾದ್ರೆ, ಸುಮಲತಾ ಅಂಬರೀಶ್ ಅವರು ಪಕ್ಷೇತರರಾಗಿ ಸ್ಪರ್ಧಿಸುವ ತೀರ್ಮಾನ ಬಿಟ್ಟು ಬಿಜೆಪಿ ಸೇರ್ಪಡೆಗೆ ಕಾರಣಗಳು? ಮಾಹಿತಿ ಇಲ್ಲಿದೆ…

ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್‌ ನಾಯಕರಿಗೆ ಪ್ರತಿಷ್ಠೆಯ ಕ್ಷೇತ್ರವಾಗಿದ್ದು, ಮಂಡ್ಯದಿಂದ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಕಣದಲ್ಲಿದ್ದಾರೆ. ಸುಮಲತಾ ಅಂಬರೀಶ್‌ ಅವರು ಮೈತ್ರಿ ಧರ್ಮ ಪಾಲನೆಯಿಂದ ಈ ಬಾರಿ ಕ್ಷೇತ್ರ ಬಿಟ್ಟುಕೊಟ್ಟು ಬಿಜೆಪಿ ಸೇರಲು ನಿರ್ಧರಿಸಿದ್ದಾರೆ.

ಇನ್ನೂ ಮಂಡ್ಯದಲ್ಲಿ ಈ ಬಾರಿ ಸುಮಲತಾ ಅಂಬರೀಶ್‌ ಅವರು ಪಕ್ಷೇತ್ರರವಾಗಿ ಸ್ಪರ್ಧೆ ಮಾಡಿದರೆ ಗೆಲುವು ಕಷ್ಟ ಎಂಬುದು ಹಲವು ಸಮೀಕ್ಷೆಗಳಿಂದ ತಿಳಿದು ಬಂದಿದ್ದು, ಬಿಜೆಪಿ ಹೈಕಮಾಂಡ್‌ ನಾಯಕರ ತೀರ್ಮಾನದಂತೆ ಕ್ಷೇತ್ರ ಬಿಟ್ಟು, ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ.

ನಾಲ್ಕು ಸಾವಿರ ಕೋಟಿ ಅನುದಾನ ನೀಡಿದ ಬಿಜೆಪಿ ಸರ್ಕಾರ 2019 ರ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಗೆಲುವು ಕಂಡು ಸಂಸದೆಯಾಗಿದ್ದರೂ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕೇಂದ್ರ ಬಿಜೆಪಿ ಸರ್ಕಾರ ಸುಮಾರು ನಾಲ್ಕು ಸಾವಿರ ಕೋಟಿ ರೂ. ಅನುದಾನವನ್ನು ನೀಡಿದೆ. ಈ ಕುರಿತು ಮಾತನಾಡಿರುವ ಸುಮಲತಾ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಕೊಟ್ಟ ಅನುದಾನದಿಂದ ಮಂಡ್ಯದ ಅಭಿವೃದ್ದಿಯಾಗಿದೆ ಎಂದು ಹೊಗಳಿದ್ದಾರೆ. ಇದು ಕೂಡ ಸುಮಲತಾ ಅಂಬರೀಶ್‌ ಅವರು ಬಿಜೆಪಿ ಕಡೆ ಆಕರ್ಷಿತರಾಗಲು ಪ್ರಮುಖ ಕಾರಣವಾಗಿದೆ.

ಕಾಂಗ್ರೆಸ್ ನವರೇ ನನ್ನ ಬೇಡ ಎಂದು ಹೇಳಿದ್ದಾರೆ.ಕಳೆದ ಬಾರಿಯ ಚುನಾವಣೆಯಲ್ಲಿ ಸುಮಲತಾ ಅಂಬರೀಶ್‌ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮುನ್ನ ಕಾಂಗ್ರೆಸ್‌ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದರು. ಆದರೆ, ಟಿಕೆಟ್‌ ನೀಡಲು ಕಾಂಗ್ರೆಸ್‌ ನಿರಾಕರಿಸಿತ್ತು. ಹಿಂದಿನ ಮೈತ್ರಿ ಸರ್ಕಾರದ ಅವಧಿಯಲ್ಲಿ ಮಂಡ್ಯ ಕ್ಷೇತ್ರವನ್ನು ಕಾಂಗ್ರೆಸ್‌ನವರು ಜೆಡಿಎಸ್‌ ಗೆ ಬಿಟ್ಟು ಕೊಟ್ಟಿದ್ದರು. ಹೀಗಾಗಿ ಸುಮಲತಾ ಅಂಬರೀಶ್‌ ಅವರಿಗೆ ಟಿಕೆಟ್‌ ಕೈ ತಪ್ಪಿತ್ತು. ಅಲ್ಲದೇ ಈ ಬಾರಿಯೂ ಬಿಜೆಪಿಯಿಂದ ಸುಮಲತಾ ಅವರಿಗೆ ಟಿಕೆಟ್‌ ಕೈ ತಪ್ಪುತ್ತೇ ಎನ್ನುವುದು ಗೊತ್ತಿತ್ತು. ಆದರೆ, ಕಾಂಗ್ರೆಸ್‌ ನ ಪ್ರಮುಖ ನಾಯಕರೊಬ್ಬರು ಸುಮಲತಾ ಅವಶ್ಯಕತೆ ನಮಗಿಲ್ಲ ಎಂದು ಹೇಳಿದ್ದು, ಸುಮಲತಾ ಅಂಬರೀಶ್‌ ಅವರು ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಗೌರವ ದೇಶದ ಪ್ರಧಾನಿ ನರೇಂದ್ರ ಮೋದಿ ಪ್ರತಿ ವಿಚಾರದಲ್ಲೂ ನನ್ನ ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ ಎಂದು ಬುಧವಾರ ನಡೆದ ಬೆಂಬಲಿಗರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸುಮಲತಾ ಅವರು ಹಾಡಿ ಹೊಗಳಿದ್ದಾರೆ. 2019 ರಲ್ಲಿ ಬಿಜೆಪಿ ನನಗೆ ಬಾಹ್ಯ ಬೆಂಬಲ ನೀಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಹೇಳಿದ್ರು. ಅಲ್ಲದೇ , 2023 ವಿಧಾನಸಭಾ ಚುನಾವಣೆಯಲ್ಲಿ ನಾನು ಬಾಹ್ಯ ಬೆಂಬಲ ಕೊಟ್ಟು ನಾನು ಪ್ರಚಾರ ಮಾಡಿದೆ. ಯಾವುದೇ ವಿಚಾರದಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಂಡೆ ತಿರ್ಮಾನವನ್ನು ಮಾಡುತ್ತಾರೆ ಎಂದು ಸುಮಲತಾ ಹೇಳಿದ್ದು, ಇದು ಸಹ ಬಿಜೆಪಿ ಸೇರ್ಪಡೆಗೆ ಪ್ರಮುಖ ಕಾರಣವಾಗಿದೆ.

ಇನ್ನು ಬಿಜೆಪಿಗೆ ಸೇರ್ಪಡೆಯಾದ ನಂತರ ರಾಜ್ಯ ಸಭೆಗೆ ಆಯ್ಕೆ ಮಾಡುವ ಅಥವಾ ಮಂಡ್ಯದ ಯಾವುದಾದರೂ ಒಂದು ಕ್ಷೇತ್ರದಲ್ಲಿ ವಿಧಾನಸಭೆಗೆ ಟಿಕೆಟ್ ನೀಡಿ ಆಯ್ಕೆಯ ಬಗ್ಗೆ ಭರವಸೆ ಕೊಟ್ಟಿದ್ದಾರೆ ಆದ್ದರಿಂದ ಪಕ್ಷೇತರರಾಗಿ ಸ್ಪರ್ಧಿಸುವ ನಿರ್ಧಾರ ಬಿಟ್ಟು ಬಿಜೆಪಿಗೆ ಸೇರ್ಪಡೆಯ ಬಗ್ಗೆ ಆಸಕ್ತಿ ತೋರಿದ್ದಾರೆ ಎಂದು ತಿಳಿದು ಬಂದಿದೆ.

Related Articles

Back to top button
error: Content is protected !!