ಇತರೆ

ಸುರತ್ಕಲ್ ಚಿತ್ರಾಪುರದಲ್ಲಿ  ಬೀಚ್ ಗೆ ತೆರಳಿದ್ದ ವೇಳೆ :ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿ ವಿದ್ಯಾರ್ಥಿನಿ ಸಾವು 

Views: 0

 

ಮಂಗಳೂರು: ವಿದ್ಯಾರ್ಥಿ-ವಿದ್ಯಾರ್ಥಿನಿಯರು ರಜೆಯ ಹಿನ್ನೆಲೆಯಲ್ಲಿ ಬೀಚ್ ಗೆ ತೆರಳಿದ್ದ ವೇಳೆ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಅದರಲ್ಲಿ ಓರ್ವ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿ ನಿಶಾ (15) ಈಕೆ ಮೂಲತಃ ನೇಪಾಲ ನಿವಾಸಿಯಾಗಿದ್ದು, ಪ್ರಸ್ತುತ ವಿಟ್ಲದಲ್ಲಿ ವಾಸವಾಗಿದ್ದಳು. ವಿಟ್ಲ ಮೂಲದ ದಿಗಂತ (15), ದಿವ್ಯರಾಜ್ (15), ತೇಜಸ್ (14), ಕೀರ್ತನ್ (16), ಅಶ್ಮಿತಾ (15), ನಿಶಾ (15) ಇವರೆಲ್ಲರೂ ಬೀಚ್ ಗೆ ತೆರಳಿದ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.

ರಜೆಯ ಹಿನ್ನೆಲೆಯಲ್ಲಿ ಬೀಚ್ ಗೆ ತೆರಳಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ. ಇವರು ಕುಳಾಯಿ ಚಿತ್ರಾಪುರ ಬೀಚ್ ಗೆ ಹೋಗಿ ಅಲ್ಲಿ ನೀರಿನಲ್ಲಿ ಆಟ ಆಡುತ್ತಿದ್ದ ವೇಳೆ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಇವರನ್ನು ಹತ್ತಿರದ ಮೀನುಗಾರರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇದರಲ್ಲಿ ನಾಲ್ಕು ಜನ ಆರೋಗ್ಯವಾಗಿದ್ದು, ತೇಜಸ್ ಎಂಬ ಬಾಲಕನನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ನಿಶಾ ಮತ್ತು ಅಶ್ವಿತಾ ನೇಪಾಳ ಮೂಲದವರು ಎಂದು ವರದಿಯಾಗಿದೆ. ಈ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!