ಆರೋಗ್ಯ
ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನ ಬಿ.ಡಿ.ಎಸ್. ವಿದ್ಯಾರ್ಥಿನಿ ಆತ್ಮಹತ್ಯೆ

Views: 114
ಕನ್ನಡ ಕರಾವಳಿ ಸುದ್ದಿ: ವಿದ್ಯಾರ್ಥಿನಿಯೋರ್ವಳು ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ಫೆ. 26ರ ರಾತ್ರಿ ನಡೆದಿದೆ.
ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನ ಬಿ.ಡಿ.ಎಸ್. ವಿದ್ಯಾರ್ಥಿನಿ ಬೆಳಗಾವಿ ಮೂಲದ ಕೃತಿಕಾ ನಿಡೋಣಿ (21) ಮೃತರು. ಕೃತಿಕಾ ಬುಧವಾರ ರಾತ್ರಿ 7.10ರಿಂದ 7.30ರ ಅವಧಿಯಲ್ಲಿ ವಸತಿ ನಿಲಯದ ತನ್ನ ಕೊಠಡಿಯಲ್ಲಿ ನೇಣುಬಿಗಿದುಕೊಂಡಿದ್ದಾರೆ.
ಯಾರಿಗೋ ಫೋನ್ ಮಾಡಿ ತಾನು ಸಾಯುತ್ತೇನೆ ಎಂದು ಕೃತಿಕಾ ಸಾಯುವ ಮೊದಲು ಹೇಳುತ್ತಿದ್ದಳು ಎನ್ನಲಾಗಿದ್ದು, ವೇಲ್‌ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಸುಳ್ಯ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.