ಇತರೆ

ಸೂಪರ್‌ವೈಸರ್‌ ಕಿರುಕುಳ ಆರೋಪ: ಡೆತ್‌ನೋಟ್‌ ಬರೆದಿಟ್ಟು ಮಹಿಳೆ ಆತ್ಮಹತ್ಯೆ

Views: 120

ಕನ್ನಡ ಕರಾವಳಿ ಸುದ್ದಿ: ಲೇಡಿ ಸೂಪರ್‌ವೈಸರ್‌ವೊಬ್ಬರು ಕಿರುಕುಳ ನೀಡಿದ ಆರೋಪ ಹಿನ್ನೆಲೆ ಮಹಿಳೆಯೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಹಿನಕಲ್‌ನಲ್ಲಿ ನಡೆದಿದೆ. ಮೃತರನ್ನು ನಾಗೇಶ್ವರಿ ಎಂದು ಗುರುತಿಸಲಾಗಿದೆ.

ಅವರು ಟಾಟಾ ಪ್ರಮೋಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಇತ್ತೀಚೆಗೆ ಕಂಪನಿಗೆ ಡಾಲಿ ಎಂಬ ಮಹಿಳೆ ಸೂಪರ್‌ವೈಸ‌ರ್ ಬಂದಿದ್ದು, ತಮ್ಮದಲ್ಲದ ತಪ್ಪಿಗೆ ತಮ್ಮನ್ನೇ ಗುರಿಯಾಗಿಸಿಕೊಂಡು ಕಿರುಕುಳ ನೀಡಿದ್ದಾರೆ ಎಂದು ನಾಗೇಶ್ವರಿ ಆರೋಪಿಸಿದ್ದಾರೆ.

ಕಳೆದ 4 ತಿಂಗಳಿನಿಂದ ವಾರದ ರಜೆಯನ್ನೂ ನೀಡಿರಲಿಲ್ಲ. ತುರ್ತು ಸಂದರ್ಭಗಳಲ್ಲಿಯೂ ರಜೆ ನೀಡದೆ. ಈ ಕುರಿತು ಪ್ರಶ್ನಿಸಿದಾಗ ಕೆಲಸದಿಂದ ತೆಗೆದುಹಾಕಲಾಗಿದೆ. ಅಲ್ಲದೆ, ನೋಟಿಸ್‌ ಪೀರಿಯಡ್ ಕೂಡ ಮಾಡಿಸಿಲ್ಲ ಎಂದು ಡೆತ್‌ನೋಟ್‌ನಲ್ಲಿ ತಿಳಿದುಬಂದಿದೆ. ಡಾಲಿ ಮೇಡಂ ಅವರ ಕಿರುಕುಳದಿಂದ ಉಲ್ಲೇಖಿಸಿರುವುದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ನ್ಯಾಯ ಕೊಡಿಸಿ ಎಂದು ನಾಗೇಶ್ವರಿ ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದೆ. ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಲಸದ ಒತ್ತಡವೋ? ಸೂಪರ್‌ವೈಸರ್ ಕಿರುಕುಳವೋ? ನಾಗೇಶ್ವರಿಯ ಆತ್ಮಹತ್ಯೆಗೆ ನಿಜವಾದ ಕಾರಣವೇನು ಎಂಬುದು ತನಿಖೆಯಿಂದ ಹೊರಬರಬೇಕಿದೆ.

 

Related Articles

Back to top button
error: Content is protected !!