ರಾಜಕೀಯ
ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

Views: 94
ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಬಂಧಿತರಾಗಿರುವ ಸೂರಜ್ ರೇವಣ್ಣಗೆ ಷರತ್ತುಬದ್ದ ಜಾಮೀನು ನೀಡಿ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶಿಸಿದೆ.
ಹಾಸನ ಜಿಲ್ಲೆ ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನು ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ, ಆದೇಶ ಕಾಯ್ದಿರಿಸಿತ್ತು. ಇಂದು ಎರಡೂ ಪ್ರಕರಣಗಳಲ್ಲಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಆರೋಪಿ ಸೂರಜ್ ರೇವಣ್ಣ ಯಾವುದೇ ರೀತಿಯಲ್ಲೂ ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು. ತನಿಖಾಧಿಕಾರಿ ಮುಂದೆ ಪ್ರತಿ ತಿಂಗಳ ಎರಡನೇ ಭಾನುವಾರ ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಹಾಜರಾಗಬೇಕು ಎಂದು ಕೋರ್ಟ್ ಸೂಚಿಸಿದೆ.






