ಸೆಂಟ್ರಿಂಗ್ ಕೆಲಸ ಮಾಡುವಾಗ ಆಯಾತಪ್ಪಿ ಬಿದ್ದ ವ್ಯಕ್ತಿ ಸಾವು
Views: 219
ಕನ್ನಡ ಕರಾವಳಿ ಸುದ್ದಿ: ಸೆಂಟ್ರಿಂಗ್ ಕಾರ್ಮಿಕರೊಬ್ಬರು ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ.ಬೆಳ್ವೆ ಗ್ರಾಮದ ಶೀನ ನಾಯ್ಕ(55) ಮೃತಪಟ್ಟವರು.
ಅವರು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು, ಜ. 24ರಂದು ನುಕ್ಯಾಡಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡುವಾಗ ಗೋಡೆ ಮೇಲಿನಿಂದ ಆಯಾತಪ್ಪಿ ಕೆಳಗೆ ಬಿದ್ದು ಕುತ್ತಿಗೆಗೆ ಗಾಯಗೊಂಡಿದ್ದು, ಗಾಯಗೊಂಡವರನ್ನು ಚಿಕಿತ್ಸೆಯ ಬಗ್ಗೆ ಉಡುಪಿ ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದ್ದು ಅಲ್ಲಿನ ವೈದ್ಯಾಧಿಕಾರಿಗಳು ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ ಮೇರೆಗೆ ದಿನಾಂಕ 28-01-2026 ರಂದು ಉಡುಪಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ಒಳರೋಗಿಯಾಗಿ ದಾಖಲಿಸಿದ್ದು, ಅಲ್ಲಿನ ವೈದ್ಯಾಧಿಕಾರಿಗಳು ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ ಮೇರೆಗೆ ದಿನಾಂಕ 29-01-2026 ರಂದು ಕೆ ಎಮ್ ಸಿ ಮಣಿಪಾಲದ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಕೊಡಿಸಿಕೊಂಡು ಅಲ್ಲಿಂದ ಮಂಗಳೂರು ವೆನ್ ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಯ ಬಗ್ಗೆ ದಾಖಲಿಸಿದ್ದು, ಗಾಯಾಳು ಶೀನ ನಾಯ್ಕ ರವರು ದಿನಾಂಕ 31-01-2026 ರಂದು ಚಿಕಿತ್ಸೆಯಲ್ಲಿರುತ್ತಾ ಚಿಕಿತ್ಸೆ ಫಲಕಾರಿಯಾಗದೆ ಬೆಳಿಗ್ಗೆ 3:40 ಗಂಟೆಗೆ ಮೃತ ಪಟ್ಟಿರುವುದಾಗಿದೆ.
ಈ ಬಗ್ಗೆ ಮೃತರ ಪತ್ನಿ ಸೀತು ಅವರು ಪೊಲೀಸರಿಗೆ ದೂರು ನೀಡಿದ್ದು, ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






